ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು

By
1 Min Read

ಕಲಬುರಗಿ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಯ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈತ್ರಾ ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದರು. ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದು ಯಾದಗಿರಿ ಜಿಲ್ಲೆಯ ಗಡಿ ದಾಟಿಸಿ ಬಿಟ್ಟಿದ್ದಾರೆ.

ಚೈತ್ರಾ ಮತ್ತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಗರದ ಜಿಲ್ಲಾಡಳಿತವು ನಿರ್ಬಂಧ ಹೇರಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿ

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಗಳನ್ನು  ಡಿಸಿ ಹೇರಿದ್ದರು.

ಸಿಆರ್‍ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಭಾನುವಾರ ಆದೇಶ ಹೊರಡಿಸಿದ್ದರು. ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿಬರ್ಂಧ ವಿಧಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *