ಜನಾರ್ದನ ರೆಡ್ಡಿ ಭರ್ಜರಿ ರೋಡ್ ಶೋ – ಬಾಗೇಪಲ್ಲಿಯಲ್ಲಿ ಅಭ್ಯರ್ಥಿ ನಿಲ್ಲಿಸಲು ತಯಾರಿ

Public TV
1 Min Read

ಚಿಕ್ಕಬಳ್ಳಾಪುರ: ಬಿಜೆಪಿ (BJP) ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya Pragati Paksha) ಸ್ಥಾಪನೆ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಬಾಗೇಪಲ್ಲಿಯಲ್ಲಿ (Bagepalli) ಭಾನುವಾರ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ.

ಬಾಗೇಪಲ್ಲಿಯ ಸುಂಕಲಮ್ಮ ದೇವಾಲಯದ ಬಳಿ ಪಕ್ಷದ ಮುಖಂಡ ಅರಿಕೆರೆ ಕೃಷ್ಣಾರೆಡ್ಡಿಯವರು ಜನಾರ್ದನ ರೆಡ್ಡಿಯವರನ್ನು ಸ್ವಾಗತಿಸಿಕೊಂಡರು. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರೆಡ್ಡಿಯವರ ಬೆಂಬಲಿಗ ನಾರಾಯಣಸ್ವಾಮಿ ನೇತೃತ್ವದಲ್ಲಿ ನೂರಾರು ಮಂದಿಯಿಂದ ಬೈಕ್ ರ್ಯಾಲಿ ನಡೆಯಿತು. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ ಜನಾರ್ದನ ರೆಡ್ಡಿ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ನಗರದ ಹೊರವಲಯದ ಕೆಎಸ್‍ಆರ್‌ಟಿಸಿ (KSRTC) ಬಸ್ ಡಿಪೋ ರಸ್ತೆಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯ ಮಹಿಳೆಯರು ಸೇರಿದ್ದರು.

ಹಳೇ ಮೈಸೂರು (Old Mysuru) ಬಯಲುಸೀಮೆ ಭಾಗದಲ್ಲೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜನಾರ್ದನ ರೆಡ್ಡಿ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

Share This Article
Leave a Comment

Leave a Reply

Your email address will not be published. Required fields are marked *