ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ

Public TV
2 Min Read

– ನ್ಯಾ. ನಾಗಪ್ರಸನ್ನ ಪೀಠದಲ್ಲಿ ವಿಚಾರಣೆ

ಬೆಂಗಳೂರು: ಕರ್ನಾಟಕದಲ್ಲಿ `ಥಗ್‌ಲೈಫ್’ (Thuglife) ಸಿನಿಮಾ ರಿಲೀಸ್ ವಿಚಾರವಾಗಿ ಕಮಲ್ ಹಾಸನ್ (Kamal Haasan) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿನಿಮಾಗೆ ಬಿಗಿಭದ್ರತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಂದು ನ್ಯಾ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಲಿದೆ.

ನಟ ಕಮಲ್ ಹಾಸನ್ ಅವರ `ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂಬ ಹೇಳಿಕೆ ರಾಜ್ಯದಲ್ಲಿ ತ್ರೀವ ಆಕ್ರೋಶ ಹುಟ್ಟುಹಾಕಿದೆ. ಆದರೂ ಕೂಡ ಕ್ಷಮೆ ಕೇಳದೇ ಉದ್ಧಟತನ ತೋರುತ್ತಿದ್ದಾರೆ. ಇದೇ 5 ರಂದು ರಿಲೀಸ್ ಆಗಲಿರುವ `ಥಗ್‌ಲೈಫ್’ ಸಿನಿಮಾಗೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಸದ್ಯ ಇದೇ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿರುವ ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನವಾಗಿದೆ.ಇದನ್ನೂ ಓದಿ: ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅನುಮತಿ ಕೋರಿ ಸಿಸಿಬಿ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಚಲನಚಿತ್ರ ಬಿಡುಗಡೆಗೆ ನಿರ್ದೇಶನ ನೀಡಬೇಕು. ಅಲ್ಲದೇ ಚಿತ್ರ ಬಿಡುಗಡೆಯಾದ ಥಿಯೇಟರ್‌ಗಳಿಗೆ ಬಿಗಿಭದ್ರತೆಯನ್ನು ಒದಗಿಸಬೇಕು. ಬಿಗಿಭದ್ರತೆ ನೀಡಲು ಡಿಜಿ&ಐಜಿಪಿ ಅವರಿಗೆ ಮತ್ತು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಬೇಕು ಅಂತ ತಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇಂದು ನ್ಯಾ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಲಿದ್ದು, ತೀರ್ಮಾನಕ್ಕಾಗಿ ಕಾದುನೋಡಬೇಕಿದೆ.

ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು. ಈ ಕುರಿತು ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಅವರು, ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ಹೇಳಿದ್ದರು.

ಅದಾದ ಬಳಿಕ ಮತ್ತೆ ಮಾತನಾಡಿದ್ದ ಕಮಲ್ ಹಾಸನ್, ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.ಇದನ್ನೂ ಓದಿ: ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Share This Article