‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

By
1 Min Read

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಸದ್ದಿಲ್ಲದೇ ಮತ್ತೊಂದು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಚಿತ್ರೀಕರಣ ಮುಗಿಸಿದ್ದು ಮಾತ್ರವಲ್ಲ, ಈಗಾಗಲೇ ಆ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಆ ದಿನಾಂಕವನ್ನೂ ಕೂಡ ಘೋಷಣೆ ಮಾಡಿದ್ದಾರೆ. ತೇಜಸ್ (Tejas) ಹೆಸರಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಅಕ್ಟೋಬರ್ 20 ರಂದು ದೇಶದಾದ್ಯಂತ ಬಿಡುಗಡೆ (Release) ಆಗಲಿದೆ.

ಇದೇ ಮೊದಲ ಬಾರಿಗೆ ಕಂಗನಾ ರಣಾವತ್, ಪೈಲೆಟ್ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಸ್ವತಃ ಕಂಗನಾ ಘೋಷಿಸುವ ಮೂಲಕ, ಈ ಸಿನಿಮಾವನ್ನು ವಾಯು ಸೇನೆಯ ಎಲ್ಲ ಪೈಲೆಟ್ ಗಳಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಸರ್ವೇಶ ಮೇವರಾ (Sarvesha Mewara) ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಮಹಿಳಾ ಪೈಲಟ್ ಒಬ್ಬರ ಜೀವನಗಾಥೆಯನ್ನು ಅದು ತೆರೆದಿಡಲಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

ಇತ್ತೀಚಿನ ದಿನಗಳಲ್ಲಿ ಕಂಗನಾ ವಿವಾದದ ಮೂಲಕವೇ ಹೆಚ್ಚು ಸುದ್ದಿ ಆಗುತ್ತಿದ್ದರು. ಇದೀಗ ಹೊಸ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿ ಸದ್ದು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸುತ್ತಿದ್ದು, ತೇಜಸ್ ಸಿನಿಮಾವಾದರೂ ಗೆಲ್ಲಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

ಒಂದು ಕಡೆ ತೇಜಸ್ ರಿಲೀಸ್ ಆಗುತ್ತಿದ್ದರೆ, ಮತ್ತೊಂದು ಕಡೆ ತಾವೇ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡುತ್ತಿರುವ ಎಮರ್ಜೆನ್ಸಿ (Emergency) ಸಿನಿಮಾ ಕೂಡ ಬಹುತೇಕ ಶೂಟಿಂಗ್ ಮುಗಿದಿದೆ. ಅದರ ತಯಾರಿಯಲ್ಲೂ ಕಂಗನಾ ತೊಡಗಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದು ಎಮರ್ಜೆನ್ಸಿ ಕರಾಳತೆಯನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ ಕಂಗನಾ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್