ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

1 Min Read

ಬೆಂಗಳೂರು: ನಂದಿನಿ (Nandini Milk) ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ (Sudha Rani) ಅವರು ಆಯ್ಕೆಯಾಗಿದ್ದಾರೆ.

ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ (D.K.Suresh) ಅವರು ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಹಂಚಿಕೊಂಡಿದ್ದಾರೆ. ಬಮೂಲ್‌ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.

Share This Article