ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

Public TV
1 Min Read

ಬೆಂಗಳೂರು: ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು, ಆದರೆ ಅದು ನಮ್ಮ ಪ್ರೀತಿಯ ಭಾಷೆ. ಪ್ರೀತಿ, ಸೋದರತೆ ಸಾಮರಸ್ಯದ ಭಾಷೆ. ಅದಕ್ಕೆ ನಾನು  ಯತ್ನಾಳ್‌ ಅವರಿಗೆ ಕೃತಜ್ಞತೆ ಹೇಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್ (UT Khader Kannada Language) ಹೇಳಿದ್ದಾರೆ.

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿಕೆಯಿಂದ ಇಂದು ವಿಧಾನಸಭೆಯಲ್ಲಿ ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಮಾತು ನಡೆಯಿತು. ಸ್ಪೀಕರ್ ಕನ್ನಡದ ಬಗ್ಗೆ ಚರ್ಚೆಯ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ. ಪ್ರೀತಿ, ಸೋದರತೆ ಸಾಮರಸ್ಯದ ಭಾಷೆಯಾಗಿದೆ. ಹೀಗಾಗಿ ನಾನು ಅದಕ್ಕೆ ಕೃತಜ್ಞತೆ ಹೇಳುತ್ತಿದ್ದೇನೆ ಎಂದರು.

ಈ ವೇಳೆ ಯತ್ನಾಳ್ ಪ್ರತಿಕ್ರಿಯಿಸಿದ್ದು, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ, ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ನಮಗೆ ನಿಮ್ಮ ಭಾಷೆ ಅರ್ಥ ಆಗಬೇಕು. ಅದಕ್ಕೆ ಆ್ಯಪ್ ಹಾಕಿಕೊಡಿ. ಆವಾಗ ನಮಗೆ ಅರ್ಥ ಆಗುತ್ತದೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಯಾವತ್ತೂ ಹಿಟ್‌ & ರನ್ ಕೇಸ್‌ – ಸಿಎಂ ತಿರುಗೇಟು

ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದೆ. ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆಯೇ ಸ್ಪೀಕರ್ ಟು ಕನ್ನಡ ಮಾಡಿ ಎಂದು ಯತ್ನಾಳ್ ಕಾಲೆಳೆದ್ರು. ಇದಕ್ಕೆ ಉತ್ತರಿಸಿದ ಸ್ಪೀಕರ್, ಸದನದಲ್ಲಿ ಎಲ್ಲರಿಗೂ ಅನುಕೂಲ ಆಗುವಂತೆ ಡಿಜಿಟಲೈಶೇಷನ್‌ ಮಾಡುತ್ತೇವೆ ಎಂದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್