60 ಲಕ್ಷ ವೆಚ್ಚದ ಬೃಹತ್ ಸೆಟ್‍ನಲ್ಲಿ ಭರಾಟೆ ಕ್ಲೈಮ್ಯಾಕ್ಸ್

Public TV
1 Min Read

– ಒಂದೇ ಚಿತ್ರದಲ್ಲಿ 10 ಖಳ ನಟರು

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಭರಾಟೆ’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ಮುಕ್ತಾಯಗೊಂಡಿದೆ. ಭರಾಟೆಯಲ್ಲಿ ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ ಮೂವರು ಸಹೋದರರು ಒಂದೇ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದ್ದಾರೆ.

ಕ್ಲೈಮಾಕ್ಸ್ ಸಾಹಸ ದೃಶ್ಯಕ್ಕೆ 10 ಜನ ವಿಲನ್ಸ್ ಗಳು ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಅಭಿನಯಿಸಿ ಆರ್ಭಟಿಸುತ್ತಿದ್ದಾರೆ. ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ, ಅವಿನಾಶ್, ಶರತ್ ಲೋಹಿತಾಶ್ವ, ಉಗ್ರಂ ಮಂಜು, ನೀನಾಸಂ ಅಶ್ವತ್ಥ್, ದೀಪಕ್, ರಾಜವಾಡೆ ಮತ್ತು ಮನಮೋಹನ್ ಕ್ಲೈಮ್ಯಾಕ್ಸ್ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ.

60 ಲಕ್ಷ ವೆಚ್ಚದ ಬೃಹತ್ ಸೆಟ್ ನಲ್ಲಿ ಹತ್ತು ಜನ ನಟರ ಜೊತೆಗೆ 80 ಜನ ಬಾಡಿ ಬಿಲ್ಡರ್ಸ್ ಮತ್ತು 400 ಜನ ಸಹ ಕಲಾವಿದರು ನಟಿಸಿದ್ದಾರೆ. ರವಿವರ್ಮ ಸಾಹಸ ಸಂಯೋಜನೆಯಲ್ಲಿ ಕ್ಲೈಮ್ಯಾಕ್ಸ್ ದೃಶ್ಯಗಳು ಮೂಡಿ ಬಂದಿವೆ.

ಭರ್ಜರಿ ಚೇತನ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಪ್ರತಿಯೊಂದು ದೃಶ್ಯಗಳನ್ನು ಅಚ್ಚುಕಟ್ಟಾಗಿ ಶೂಟ್ ಮಾಡುತ್ತಿದ್ದಾರೆ. ಖುದ್ದು ಶ್ರೀಮುರಳಿಯವರೇ ಮರುಭೂಮಿಯಲ್ಲಿನ ಚಿತ್ರೀಕರಣದ ಬಗ್ಗೆ ಥ್ರಿಲ್ ಆಗಿದ್ದಾರೆ. ನಿರ್ದೇಶಕ ಭರ್ಜರಿ ಚೇತನ್ ಅವರ ಕಾರ್ಯಶೈಲಿ ಮತ್ತು ಲೊಕೇಷನ್ನುಗಳನ್ನು ಹುಡುಕುವ ಚಾಕಚಕ್ಯತೆಯ ಬಗ್ಗೆ ಶ್ರೀಮುರಳಿ ಮನಸೋತಿದ್ದಾರೆ. ಇದುವರೆಗೂ ಮರುಭೂಮಿಯಲ್ಲಿ ಸಾಕಷ್ಟು ಚಿತ್ರಗಳ ಚಿತ್ರೀಕರಣವಾಗಿದೆ. ಆದರೆ ಚೇತನ್ ಈವರೆಗೂ ಕನ್ನಡಿಗರು ನೋಡಿರದ ಆಂಗಲ್ ಗಳಲ್ಲಿ, ಯಾರೂ ಹೆಚ್ಚಾಗಿ ಹೋಗದ ಮರುಭೂಮಿಯ ಪ್ರದೇಶಗಳನ್ನೇ ಚಿತ್ರೀಕರಣಕ್ಕೆ ಆಯ್ದುಕೊಂಡಿದ್ದರು.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *