ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

Public TV
1 Min Read

ಕಿರುತೆರೆಯ ಜನಪ್ರಿಯ ಸೀರಿಯಲ್‌ ‘ನನ್ನರಸಿ ರಾಧೆ’ ನಟಿ (Nannarasi Radhe) ಕೌಸ್ತುಭ ಮಣಿ (Kaustubha Mani) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ. ತಾಯಿಯಾಗ್ತಿರುವ ಶುಭಸುದ್ದಿಯನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಖುದ್ದಾಗಿ ನಟಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಮತ್ತು ಕಿರುತೆರೆ ಕಲಾವಿದರು ಕೌಸ್ತುಭಗೆ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

ಕಳೆದ ವರ್ಷ ಏಪ್ರಿಲ್‌ನಲ್ಲಿ ಸಿದ್ಧಾಂತ್ (Sidhanth) ಜೊತೆ ಕೌಸ್ತುಭ ಮಣಿ ಅದ್ಧೂರಿಯಾಗಿ ಮದುವೆಯಾದರು. ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದನ್ನೂ ಓದಿ:ನಮ್ಮ ಜನಗಳನ್ನ ಸಾಯಿಸ್ತಾರೆ ಅಂದ್ರೆ ನಾವ್ ಯುದ್ಧ ಮಾಡ್ಲೇಬೇಕು – ಉಗ್ರರ ದಾಳಿ ಖಂಡಿಸಿದ ಪ್ರೇಮ್

ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ಕೌಸ್ತುಭ ಮಣಿ ಹಿರಿತೆರೆಯಲ್ಲೂ ನಟಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆ ಕೌಸ್ತುಭ ಕೂಡ ನಟಿಸಿದ್ದಾರೆ. ಈ ಚಿತ್ರದಲ್ಲಿ ಆಗಸ್ಟ್ 15ರಂದು ಬಹುಭಾಷೆಗಳಲ್ಲಿ ’45’ ಚಿತ್ರ ರಿಲೀಸ್ ಆಗಲಿದೆ.

Share This Article