ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ

Public TV
2 Min Read

ವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಕಿಚ್ಚ ಸುದೀಪ್ ಸೇರಿದಂತೆ ಚಂದನವನದ ಖ್ಯಾತ ನಟರ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ಸೂರಪ್ಪ ಬಾಬು ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ.

ಸೂರಪ್ಪ ಬಾಬು ಅವರು ಬೆಂಗಳೂರಿನಿಂದ ಬೆಳಗಿನ ಜಾವ ಕುಟುಂಬಸ್ಥರೊಂದಿಗೆ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದ್ದು, ಯಾರಿಗೂ ಯಾವುದೇ ರೀತಿ ತೊಂದರೆಯಾಗಿಲ್ಲ. ಹೊಸೂರಿನಲ್ಲಿ ಘಟನೆ ಸಂಭವಿಸಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದರೂ, ಯಾರಿಗೂ ತೀವ್ರ ಗಾಯವಾಗಿಲ್ಲ ಎಂದು ಸೂರಪ್ಪ ಬಾಬು ಅವರೇ ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ಕೋವಿಡ್‌ ಕೇಸ್‌ ಕಡಿಮೆ ದಾಖಲು – ಇಂದು 133 ಮಂದಿಗೆ ಸೋಂಕು

ಭಾನುವಾರ ಬೆಳಗ್ಗೆ ಸೂರಪ್ಪ ಬಾಬು ಕುಟುಂಬಸ್ಥರು ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹೊಸೂರು ಕ್ರಾಸ್ ಬಳಿ ಕಾರು ಆಕ್ಸಿಡೆಂಟ್ ಆಗಿದೆ. ಈ ವೇಳೆ ಮುಂಭಾಗದಲ್ಲಿ ಕೂತಿದ್ದ ಸೂರಪ್ಪ ಬಾಬು ಅವರ ಕಾಲಿಗೆ ಪೆಟ್ಟಾಗಿದ್ದು, ಇತರರಿಗೆ ಯಾವುದೇ ತೊಂದರೆಯಾಗಿಲ್ಲ. ಕಾಲಿಗೆ ಕೊಂಚ ಪೆಟ್ಟು ಬಿದ್ದ ಕಾರಣ ವೈದ್ಯರಿಗೆ ತೋರಿಸಲು ಸೂರಪ್ಪ ಬಾಬು ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಿದ್ದಾರೆ.

ಸೂರಪ್ಪ ಹೇಳಿದ್ದೇನು?
ನಾವು ಏಳು ಜನರು ಇನ್ನೋವಾ ಕಾರಿನಲ್ಲಿ ದೇವಸ್ಥಾನಕ್ಕೆಂದು ಹೊರಟ್ಟಿದ್ದೆವು. ಆದರೆ ರಸ್ತೆ ಮಧ್ಯೆ ಅಪಘಾತ ಸಂಭವಿಸಿದೆ. ನನಗೆ ಇದೇ ಮೊದಲು ಈ ರೀತಿಯ ಅವಘಡ ಸಂಭವಿಸಿದೆ. ಈ ವೇಳೆ ನನ್ನನ್ನು ಅನೇಕರು ಬಂದು ಗುರುತಿಸಿ ಬೆಂಗಳೂರು ತಲುಪಲು ವ್ಯವಸ್ಥೆ ಮಾಡಿದರು.

Soorappa Babu

ನಾನು ಮುಂದಿನ ಸೀಟಿನಲ್ಲಿ ಕುಳಿತಿದ್ದೆ. ಅದಕ್ಕೆ ನನಗೆ ತೀವ್ರ ಕಾಲು ನೋವು ಕಾಣಿಸಿಕೊಂಡಿತು. ಹೀಗಾಗಿ ವೈದ್ಯರು ಚಿಕಿತ್ಸೆ ಕೊಟ್ಟಿದ್ದಾರೆ. ಪ್ರಸ್ತುತ ನನ್ನ ಕಾಲಿಗೆ ಬ್ಯಾಂಡೇಜ್ ಹಾಕಲಾಗಿದ್ದು, ಈಗ ಆರಾಮಾಗಿದ್ದೇನೆ. ಸ್ವಲ್ಪ ದಿನ ರೆಸ್ಟ್ ಮಾಡಿ ಎಂದು ವೈದ್ಯರು ಸೂಚಿಸಿದ್ದಾರೆ. ಇದನ್ನೂ ಓದಿ:  ಪಾಕ್ ವ್ಯಕ್ತಿ ಭೇಟಿಯಾಗಲು ತೆರಳುತ್ತಿದ್ದ ಯುವತಿಯನ್ನು ಗಡಿಯಲ್ಲಿ ತಡೆದ ಪೊಲೀಸರು – ಲುಕ್‍ಔಟ್ ನೋಟಿಸ್ ಜಾರಿ

soorappa babu

ಕನ್ನಡ ಚಿತ್ರರಂಗದಲ್ಲಿ ವಿತರಕರಾಗಿ ಹಾಗೂ ನಿರ್ಮಾಪಕರಾಗಿ ತೊಡಗಿಸಿಕೊಂಡಿರುವ ಸೂರಪ್ಪ ಬಾಬು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಪೃಥ್ವಿ, ರವಿಚಂದ್ರನ್ ಅಭಿನಯದ ದಶಮುಖ ಹಾಗೂ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-2, ಕೋಟಿಗೊಬ್ಬ-3 ಸಿನಿಮಾಗಳನ್ನು ಸೂರಪ್ಪ ಬಾಬು ನಿರ್ಮಿಸಿದ್ದರು.

Live Tv

Share This Article
Leave a Comment

Leave a Reply

Your email address will not be published. Required fields are marked *