ನಟ ನಾಗಭೂಷಣ್ ಮದುವೆಯಲ್ಲಿ ಕನ್ನಡದ ಸ್ಟಾರ್ಸ್

Public TV
1 Min Read

ನ್ನಡ ಹಾಸ್ಯ ನಟ ಟಗರು ಪಲ್ಯ ಖ್ಯಾತಿಯ ನಟ ನಾಗಭೂಷಣ್ (Nagabhushan) ಜನವರಿ 28ರಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ಸಮಾರಂಭದಲ್ಲಿ ನಾಗಭೂಷಣ್ ಸ್ನೇಹಿತರು, ಆಪ್ತರು ಹಾಗೂ ಸಿನಿಮಾ ಕಲಾವಿದರು ಭಾಗಿಯಾಗಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ.

ನಾಗಭೂಷಣ್ ಬಹುಕಾಲದ ಗೆಳತಿ, ನಟಿ ಪೂಜಾ ಪ್ರಕಾಶ್ (Pooja Prakash) ಜೊತೆ ಬೆಳಗಾವಿಯಲ್ಲಿ ಅವರು ಮದುವೆ (marriage) ಆಗಿದ್ದು, ಡಾಲಿ ಧನಂಜಯ್, ವಾಸುಕಿ ವೈಭವ್, ಪೂರ್ಣಚಂದ್ರ ತೇಜಸ್ವಿ, ಕಲಾವಿದರ ಬಾದಲ್, ನಟ ನೀನಾಸಂ ಸತೀಶ್  ಸೇರಿದಂತೆ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ.

ಈ ಮದುವೆಯಲ್ಲಿ ಗೆಳೆಯ ನಾಗಭೂಷಣ್ ಅವರಿಗಾಗಿಯೇ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ ಸೊಗಸಾದ ಗೀತೆಗಳನ್ನು ಹಾಡಿದ್ದಾರೆ. ಜೊತೆಗೆ ಹೊಸ ಜೀವನಕ್ಕೆ ವಾಸುಕಿ ದಂಪತಿ ಸಮೇತ ಶುಭ ಹಾರೈಸಿದ್ದಾರೆ.

ಟಗರು ಪಲ್ಯ ಸೇರಿದಂತೆ ಅನೇಕ ಚಿತ್ರಗಳಿಗೆ ನಾಯಕನಾಗಿ ನಟಿಸಿರುವ ನಾಗಭೂಷಣ್, ನಾನಾ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಇವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾವನ್ನು ಡಾಲಿ ಧನಂಜಯ್ ಅವರೇ ನಿರ್ಮಾಣ ಮಾಡುತ್ತಿರುವುದು ವಿಶೇಷ.

 

ನಾಗಭೂಷಣ್ ಮದುವೆ ಆಗುತ್ತಿರುವ ಪೂಜಾ ಪ್ರಕಾಶ್ ಚಿತ್ರಕಲೆ ಮತ್ತು ಗ್ರಾಫಿಕ್ಸ್ ಡಿಸೈನ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೊನ್ನೆ ಬೆಳಗಾವಿಯಲ್ಲಿ ಇವರ ವಿವಾಹ ನಡೆದಿದ್ದು, ಫೆಬ್ರವರಿ 2 ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಲಿದೆ.

Share This Article