Breaking: ನವೆಂಬರ್‌ 27ಕ್ಕೆ ‌’ಕಾಂತಾರ 2′ ಮುಹೂರ್ತ ಫಿಕ್ಸ್

Public TV
1 Min Read

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ನಟಿಸಿದ ‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ.

ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ. ಇದನ್ನೂ ಓದಿ: ನನ್ನ ರಕ್ತಹೀರಿಕೊಂಡು ಬಿಟ್ಟಿದ್ದಾರೆ- ಸಂಗೀತಾಗೆ ರೇಗಿಸಿದ ಕಾರ್ತಿಕ್‌

ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ.

ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.

Share This Article