ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ರಿಷಬ್ ಶೆಟ್ಟಿ ದಂಪತಿ

Public TV
1 Min Read

‘ಕಾಂತಾರ’ (Kantara) ಸಿನಿಮಾ ಮೂಲಕ ಕರ್ನಾಟಕದ ತುಳುನಾಡ ದೈವದ ಕಥೆಯನ್ನು ಇಡೀ ದೇಶಕ್ಕೆ ತಲುಪಿಸಿದ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜ.22) ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪತ್ನಿ ಪ್ರಗತಿ ಜೊತೆ ಭಾಗಿಯಾಗಿದ್ದಾರೆ. ಈ ಕುರಿತ ಸುಂದರ ಫೋಟೋವನ್ನು ರಿಷಬ್ ಹಂಚಿಕೊಂಡಿದ್ದಾರೆ.

500 ವರ್ಷಗಳ ನಂತರ ಎಲ್ಲರ ಕನಸು ನನಸಾಗಿದೆ. ಇಂದು ಅಯೋಧ್ಯೆಯ (Ayodhya) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದಲ್ಲಿ ಭಾಗಿಯಾಗಿರೋದಕ್ಕೆ ರಿಷಬ್ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮರ್ಯಾದಾ ಪುರುಷೋತ್ತಮ ರಾಮನಿಗೆ ನಮನ ಸಲ್ಲಿಸಿ ಗುಣಗಾನ ಮಾಡಿದ ಯಶ್‌

 

View this post on Instagram

 

A post shared by Rishab Shetty (@rishabshettyofficial)

ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ಎಂದು ಶೀರ್ಷಿಕೆ ಕೊಟ್ಟು ರಾಮಮಂದಿರದ ಮುಂದೆ ನಿಂತು ಪತ್ನಿ ಪ್ರಗತಿ ಜೊತೆ ರಿಷಬ್ ಶೆಟ್ಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಿಷಬ್ ದಂಪತಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕೂಡ ಭೇಟಿಯಾಗಿದ್ದಾರೆ.

ಅಯೋಧ್ಯೆಯ ಇಂದಿನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಕಂಗನಾ, ಆಲಿಯಾ- ರಣ್‌ಬೀರ್ ದಂಪತಿ, ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಅಮಿತಾಭ್‌ ಬಚ್ಚನ್‌, ಕತ್ರಿನಾ ಕೈಫ್ ದಂಪತಿ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

Share This Article