ಯಶ್ ‘ಟಾಕ್ಸಿಕ್’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ ಎಂದ ರಿಷಬ್ ಶೆಟ್ಟಿ

By
1 Min Read

ನ್ಯಾಷನಲ್ ಸ್ಟಾರ್ ಯಶ್ (Yash) ಜ.8ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ‘ಟಾಕ್ಸಿಕ್’ (Toxic) ಸಿನಿಮಾದ ಮಾಹಿತಿ ಸಿಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಕುರಿತು ರಿಷಬ್ ಶೆಟ್ಟಿ (Rishab Shetty) ಕೂಡ ಸೋಶಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಗನ್ಸ್ ಅಂಡ್ ರೋಸಸ್ ಮೂಲಕ ಕಣ್ತೆರೆದ ಕಥೆಗಾರ ಶರತ್!


‘ಟಾಕ್ಸಿಕ್’ ಸಿನಿಮಾ ಅಪ್‌ಡೇಟ್‌ಗಾಗಿ ನಾನು ಕಾಯುತ್ತಿದ್ದೇನೆ ಎಂದು ರಿಷಬ್ ಶೆಟ್ಟಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕಾಯುತ್ತಿದ್ದೇನೆ ಎಂದು ಲವ್ಲಿ ಇಮೋಜಿ ಹಾಕಿ ‘ಟಾಕ್ಸಿಕ್’ ಕುರಿತು ನಟ ಪ್ರತಿಕ್ರಿಯೆ ನೀಡಿದ್ದಾರೆ.

‘ಕೆಜಿಎಫ್ 2’ ಬಳಿಕ ಯಶ್ ಅವರು ನಿರ್ದೇಶಕಿ ಗೀತು ಮೋಹನ್‌ದಾಸ್ ಜೊತೆ ಕೈಜೋಡಿಸಿದ್ದಾರೆ. ಯಶ್ ಜೊತೆ ಕೆವಿಎನ್ ಸಂಸ್ಥೆ ಕೂಡ ಕೈಜೋಡಿಸಿದೆ. ಜ.8ರಂದು ಬೆಳಗ್ಗೆ 10:25ಕ್ಕೆ ಟಾಕ್ಸಿಕ್ ಬಿಗ್ ಅಪ್‌ಡೇಟ್ ಹೊರಬೀಳಲಿದೆ. ನಟನ ಲುಕ್ ಅನಾವರಣ ಆಗಲಿದೆ. ಫ್ಯಾನ್ಸ್ ಕಾತರದಿಂದ ಎದುರು ನೋಡುತ್ತಿದ್ದಾರೆ.

Share This Article