2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

Public TV
2 Min Read

– ಸಿನಿ ಪಯಣ ನೆನೆಪಿಸಿಕೊಂಡು ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್

ಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಕಾಂತಾರ ಚಾಪ್ಟರ್‌ 1 (Kantara Chapter 1) ಭಾರತೀಯ ಚಿತ್ರರಂಗದಲ್ಲಿ ಹೊಸ ಹಿಸ್ಟರಿ ಬರೆಯುತ್ತಿದೆ. ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್‌ ಪ್ರದರ್ಶನ ಕಂಡು ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ಪ್ರೇಕ್ಷಕರ ಉತ್ತಮ ಸ್ಪಂದನೆಗೆ ರಿಷಬ್‌ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಂತಾರ ಚಾಪ್ಟರ್‌ 1 ಸಿನಿಮಾಗೆ ಪ್ರೇಕ್ಷಕರಿಂದ ಸಿಗುತ್ತಿರುವ ಭರ್ಜರಿ ರೆಸ್ಪಾನ್ಸ್‌ ಕುರಿತು ರಿಷಬ್‌ ಶೆಟ್ಟಿ (Rishab Shetty) ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ‘2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ’ ಎಂದು ಕೃತಜ್ಞತೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: Kantara: Chapter 1ಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನವೇ 55 ಕೋಟಿ ಗಳಿಕೆ

ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬ ವ್ಯಕ್ತಿಗೂ ಸದಾ ಕೃತಜ್ಞರಾಗಿರುತ್ತೇನೆ ಎಂದು ರಿಷಬ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ. 2016ರಲ್ಲಿ ಸಿನಿಮಾ ಪ್ರದರ್ಶನಕ್ಕಾಗಿ ಒದ್ದಾಡಿದ ಸಂದರ್ಭದ ಪೋಸ್ಟ್‌ ಅನ್ನು ಕೂಡ ರೀ-ಪೋಸ್ಟ್‌ ಮಾಡಿದ್ದಾರೆ.

ನಟ ರಿಷಬ್‌ ಶೆಟ್ಟಿ ಅವರ ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿದೆ. ಕಾಂತಾರ ಚಾಪ್ಟರ್‌ 1 ಸಿನಿಮಾಗೆ ಪ್ರೇಕ್ಷಕರು ಫುಲ್‌ ಮಾರ್ಕ್ಸ್‌ ಕೊಟ್ಟಿದ್ದಾರೆ. ರಿಷಬ್‌ ಶೆಟ್ಟಿ ಅಭಿನಯಕ್ಕೆ ಮಾರುಹೋಗಿದ್ದಾರೆ. ಕಾಂತಾರ ಚಿತ್ರತಂಡಕ್ಕೆ ಅಭಿನಂದನೆ ಕೂಡ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕಾಂತಾರ ದೃಶ್ಯ ವೈಭೋಗ ಕಣ್ತುಂಬಿಕೊಂಡ ಪ್ರೇಕ್ಷಕರು ಹೇಳಿದ್ದೇನು?

Share This Article