ಮಂಗಳೂರು: ಕಾಂತಾರ ಚಾಪ್ಟರ್ 1 (Kantara Chapter 1) ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು (Vijay Kiragandur), ಕರಾವಳಿ ದೇವಿಯ ಮೊರೆ ಹೋಗಿದ್ದಾರೆ.
ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ (Kateel Durgaaparameshwari Temple) ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್
ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಕಾಂತಾರ ಅಧ್ಯಾಯ 1 ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವಾದ್ಯಂತ 500 ಕೋಟಿ ಗಳಿಸಿದೆ ಎಂದು ಹೊಂಬಾಳೆ ಫಿಲಂಸ್ ಅಧಿಕೃತವಾಗಿ ತಿಳಿಸಿದೆ. ‘ಗಲ್ಲಾಪೆಟ್ಟಿಗೆಯಲ್ಲಿ ದೈವಿಕ ಸಿನಿಮೀಯ ಚಂಡಮಾರುತವು ಇನ್ನೂ ಹೆಚ್ಚಿನ ಗಳಿಕೆಯನ್ನು ಮಾಡುತ್ತಿದೆ. ಕಾಂತಾರ ಅಧ್ಯಾಯ 1 ಮೊದಲ ವಾರದಲ್ಲಿ ವಿಶ್ವಾದ್ಯಂತ 509.25 ಕೋಟಿ+ ಜಿಬಿಒಸಿಯನ್ನು ದಾಟಿದೆ! ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಬ್ಲಾಕ್ಬಸ್ಟರ್ ಕಾಂತಾರ’ ಎಂದು ಪೋಸ್ಟ್ ಹಂಚಿಕೊಂಡಿದೆ. ಇದನ್ನೂ ಓದಿ: ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – 1 ವಾರಕ್ಕೆ 509 ಕೋಟಿ ಕಲೆಕ್ಷನ್
ಅ.2 ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು, ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ 509 ಕೋಟಿ ಕಲೆಕ್ಷನ್ ಮಾಡಿದೆ.