ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

Public TV
1 Min Read

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌ 1 (Kantara Chapter 1) ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ದ್ರೌಪದಿ ಮುರ್ಮು (Droupadi Murmu) ಅವರು ಸಿನಿಮಾ ವೀಕ್ಷಿಸಲಿದ್ದಾರೆ.

ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty), ನಟಿ ರುಕ್ಮಿಣಿ ವಸಂತ್‌, ನಿರ್ಮಾಪಕ ಚಲುವೆ ಗೌಡ ಸಮ್ಮುಖದಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗುವುದು. ಬಳಿಕ ಚಿತ್ರತಂಡವನ್ನು ರಾಷ್ಟ್ರಪತಿಗಳು ಗೌರವಿಸಲಿದ್ದಾರೆ. ಇದನ್ನೂ ಓದಿ: ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

ಅ.2 ರಂದು ಸಿನಿಮಾ ಬಿಡುಗಡೆಯಾದಾಗಿನಿಂದ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ರಿಲೀಸ್‌ ಆದ 3 ದಿನದಲ್ಲೇ 160ಕ್ಕೂ ಹೆಚ್ಚು ಕೋಟಿ ಗಳಿಕೆ ಮಾಡಿದೆ. ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್‌ ಅಡಿ ವಿಜಯ್‌ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಾಣ ಮಾಡಿದ್ದಾರೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ಬಗ್ಗೆ ಸ್ಟಾರ್‌ ನಟರು, ನಿರ್ದೇಶಕರು, ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾಗೆ ಪ್ರೇಕ್ಷಕರಿಂದಲೂ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

Share This Article