– ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು
ಬೆಂಗಳೂರು: ದೈವ ನರ್ತನ ಹಿಂದೂ ಸಂಸ್ಕ್ರತಿ (Hindu Culture) ಭಾಗ. ಇದು ನಮ್ಮ ಸಂಸ್ಕ್ರತಿ ಭಾಗ ಇದನ್ನು ಮತ್ತಷ್ಟು ಗಟ್ಟಿ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ದೈವನರ್ತಕರಿಗೆ ಪ್ರತಿ ತಿಂಗಳು ಮಾಶಾಸನ ನೀಡಲು ತೀರ್ಮಾನಿಸಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ (Sunil Kumar) ಘೋಷಣೆ ಮಾಡಿದ್ದಾರೆ.
ಭೂತಾರಾಧನೆ ಮಾಡುವ ದೈವನರ್ತಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಗಲಿದೆ ಎಂದು ಸಚಿವರು ಘೋಷಣೆ ಮಾಡಿದರು. ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡುವ ತೀರ್ಮಾನ ಮಾಡಿದ್ದೀವಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತೀ ತಿಂಗಳು 2 ಸಾವಿರ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ. 60 ವರ್ಷ ತುಂಬಿದ ದೈವನರ್ತನ ಮಾಡುವವರಿಗೆ ಮಾಸಾಶನ ಸಿಗಲಿದೆ ಎಂದರು.
ಭೂತಾರಾಧನೆ ಕುರಿತ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ (Bhtharadhane) ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ: ಚೇತನ್‌ಗೆ ಉಪೇಂದ್ರ ಟಾಂಗ್
ಇದೇ ವೇಳೆ ರಾಮಮಂದಿರ (RamaMandira) ಸ್ಫೋಟಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಚು ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ತುಷ್ಟೀಕರಣದ ರಾಜಕಾರಣಕ್ಕೆ ಪಿಎಫ್‍ಐ ಅನ್ನು ದೇಶದಲ್ಲಿ ಬೆಂಬಲಿಸಲಾಗ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಇಂಥ ಸಂಘಟನೆಗಳನ್ನು ವಿರೋಧಿಸುವವರೆಗೂ ಇಂಥ ಶಕ್ತಿಗಳು ವಿಜೃಂಭಿಸುತ್ತಿರುತ್ತವೆ ಎಂದರು. ಇದನ್ನೂ ಓದಿ: ಮುಸ್ಲಿಮರು ರಾಮ ಮಂದಿರ ಧ್ವಂಸ ಮಾಡುವ ಕನಸನ್ನು ಕಾಣಬೇಡಿ: ಪ್ರಮೋದ್ ಮುತಾಲಿಕ್
ಪಿಎಫ್‍ಐ ಅನ್ನು ನಿಷೇಧ ಮಾಡಿದ ಬಳಿಕ ಹಲವು ಸಂಗತಿಗಳು ಬೆಳಕಿಗೆ ಬರುತ್ತಿವೆ. ಪಿಎಫ್‍ಐ ಸಂಘಟನೆ ಭಾರತವನ್ನು ಇಸ್ಲಾಮೀಕರಣ ಮಾಡುವ ದೊಡ್ಡ ಸಂಚು ಮಾಡುತ್ತಿತ್ತು. ಇವತ್ತು ರಾಮಮಂದಿರವನ್ನು ಧ್ವಂಸ ಮಾಡುವ ಅಜೆಂಡಾ ಇಟ್ಕೊಂಡಿತ್ತು. ಈ ಅಜೆಂಡಾದ ಕಾರ್ಯತಂತ್ರವನ್ನು ಈಗ ಕೇಂದ್ರ ಸರ್ಕಾರ ವಿಫಲಗೊಳಿಸಿದೆ. ಇಡೀ ತನಿಖಾ ತಂಡಕ್ಕೆ ನಾನು ಅಭಿನಂದನೆ ಸಲ್ಲಿಸ್ತೇನೆ. ಯಾವುದೇ ಕಾರಣಕ್ಕೂ ಭಾರತವನ್ನು ಇಸ್ಲಾಮೀಕರಣ ಮಾಡಲು ಬಿಡಲ್ಲ. ನಮ್ಮದು ಹಿಂದೂ ರಾಷ್ಟ್ರ, ಹಿಂದೂ ರಾಷ್ಟ್ರವಾಗಿಯೇ ಇನ್ನಷ್ಟು ಗಟ್ಟಿ ಮಾಡ್ತೇವೆ ಎಂದು ತಿಳಿಸಿದರು.