‘ಕಾಂತಾರ’ ನಂತರ ಕೊರಗಜ್ಜ ದೈವದ ನೈಜಕಥೆ

Public TV
2 Min Read

ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು  ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ  ಬಳ್ಳಮಂಜದ ಇತಿಹಾಸ ಪ್ರಸಿದ್ಧ  ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ  ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು  ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ  ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇತ್ತೀಚೆಗೆ  ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ  “ಅಗೋ ಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು  ಡೊಳ್ಳು -ತಮಟೆಗಳ ಸ ವಿಶೇಷ  ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

ಖ್ಯಾತ ಹಾಲಿವೂಡ್-ಬಾಲಿವೂಡ್ ನಟ  ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ.  ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ.  ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ  ನಾಲ್ಕನೆಯ ಸಿನೆಮಾ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *