ವೋಟ್‌ ಮಾಡುವುದು ನಮ್ಮ ಹಕ್ಕು, ನಮ್ಮ ಜವಾಬ್ದಾರಿ- ರಿಷಬ್‌ ಶೆಟ್ಟಿ

Public TV
1 Min Read

‘ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ‘ಕಾಂತಾರ’ ಪಾರ್ಟ್‌ 1 (Kantara 1) ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ ಮಾಡಿದ್ದಾರೆ. ರಿಷಬ್ ಹುಟ್ಟುರಾದ ಬೈಂದೂರಿನ ಕೆರಾಡಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಇದನ್ನೂ ಓದಿ:ಮತ ಚಲಾಯಿಸಿದ ರಿತೇಶ್ ದೇಶ್‌ಮುಖ್, ಜೆನಿಲಿಯಾ ದಂಪತಿ

ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕೆ, ವೋಟ್ ಮಾಡುವುದು ನಮ್ಮ ಹಕ್ಕು. ಅದು ಪ್ರತಿಯೊಬ್ಬರ ಜವಾಬ್ದಾರಿ. ಇದೀಗ ನಾನು ಮತ ಚಲಾಯಿಸಿದ್ದೇನೆ ಎಂದು ರಿಷಬ್ ಮಾತನಾಡಿದ್ದಾರೆ. ಎಲ್ಲರೂ ಮತ ಚಲಾಯಿಸುವಂತೆ ರಿಷಬ್‌ ಮನವಿ ಮಾಡಿದ್ದಾರೆ. ಮತ ಚಲಾಯಿಸಿದ ನಂತರ ರಿಷಬ್ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಲ್ಲರೊಂದಿಗೆ ಬೆರತು ಮಾತನಾಡಿ ಸೆಲ್ಫಿ ನೀಡಿ ನಟ ರಿಷಬ್ ತೆರಳಿದ್ದಾರೆ.

ಈ ವೇಳೆ, ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿರುವ ಬಗ್ಗೆ ರಿಷಬ್ ಮಾತನಾಡಿ, ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article