Kargil Vijay Diwas: ಹುತಾತ್ಮ ಯೋಧರಿಗೆ ರಾಜನಾಥ್‌ ಸಿಂಗ್‌ ನಮನ

Public TV
1 Min Read

ನವದೆಹಲಿ: ಪಾಕ್‌ ವಿರುದ್ಧ 1999ರ ಕಾರ್ಗಿಲ್‌ ಯುದ್ಧದಲ್ಲಿ ಭಾರತದ ವಿಜಯಕ್ಕಾಗಿ ಬಲಿದಾನಗೈದ ಹುತಾತ್ಮ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ನಮನ ಸಲ್ಲಿಸಿದ್ದಾರೆ.

1999ರ ಜುಲೈ 26 ರಂದು ಲಡಾಖ್‌ನ ಕಾರ್ಗಿಲ್‌ನ ಹಿಮಾವೃತ ಶಿಖರಗಳ ಮೇಲೆ ಸುಮಾರು ಮೂರು ತಿಂಗಳ ಕಾಲ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆಯಿತು. ಕೊನೆಗೆ ಭಾರತ ಜಯ ಸಾಧಿಸಿತು. ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯದ ನೆನಪಿಗಾಗಿ ಈ ದಿನವನ್ನು ‘ಕಾರ್ಗಿಲ್ ವಿಜಯ್ ದಿವಸ್’ (Kargil Vijay Diwas) ಎಂದು ಆಚರಿಸಲಾಗುತ್ತದೆ.

ಕಾರ್ಗಿಲ್ ವಿಜಯ್ ದಿವಸದಂದು, ನಮ್ಮ ರಾಷ್ಟ್ರದ ಗೌರವವನ್ನು ರಕ್ಷಿಸುವಲ್ಲಿ ಅಸಾಧಾರಣ ಧೈರ್ಯ, ದೃಢನಿಶ್ಚಯ ಪ್ರದರ್ಶಿಸಿದ ನಮ್ಮ ಧೈರ್ಯಶಾಲಿಗಳಿಗೆ ಹೃತ್ಪೂರ್ವಕ ಗೌರವಗಳನ್ನು ಸಲ್ಲಿಸುತ್ತೇನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರ ಅತ್ಯುನ್ನತ ತ್ಯಾಗವು ನಮ್ಮ ಸಶಸ್ತ್ರ ಪಡೆಗಳ ಅಚಲವಾದ ದೃಢಸಂಕಲ್ಪದ ಶಾಶ್ವತ ಜ್ಞಾಪನೆಯಾಗಿದೆ. ಭಾರತವು ಅವರ ಸೇವೆಗೆ ಸದಾ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

Share This Article