ಕಾರ್ಕಳ ಅತ್ಯಾಚಾರ ಪ್ರಕರಣ- ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

Public TV
1 Min Read

ಉಡುಪಿ: ಕಾರ್ಕಳದಲ್ಲಿ (Karkala) ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ (Police Coustody) ಒಪ್ಪಿಸಿದೆ.

ಆ.23 ರಂದು ಅತ್ಯಾಚಾರ ಆರೋಪ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇದನ್ನೂ ಓದಿ: ಡ್ರಂಕ್‌ & ಡ್ರೈವ್‌: ಬೆಂಗಳೂರಲ್ಲಿ ಒಂದೇ ದಿನ 200 ಕೇಸ್‌ ದಾಖಲು

ಈ ಬಗ್ಗೆ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಮಾತನಾಡಿ, ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು. ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ

ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

Share This Article