ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

Public TV
1 Min Read

ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೊ (KCC&I) ಕರೆ ನೀಡಿದೆ.

ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್‌ಗೆ ಕರೆ ನೀಡಿಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್‌ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‌ಗಳಿಂದ ಬೆಂಬಲ ದೊರಕಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಸಿಸಿ&ಐ, ಎಸ್ಕಾಂನ ವಿದ್ಯುತ್ ದರ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಬಂದ್‌ಗೆ ಕರೆ ನೀಡಿದ್ದೇವೆ. ಈ ಮೂಲಕವಾದರು ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್

ಗದಗ ಜಿಲ್ಲಾ ಚೇಂಬರ್ ವಿಜಯಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾಸನ ಹಾಗೂ ಬಳ್ಳಾರಿಯಲ್ಲಿನ ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ; ಫ್ರೀ ಬಸ್ ಪ್ರಯಾಣ ಯೋಜನೆಗೆ ಮಹಿಳೆ ವಿರೋಧ

Share This Article