ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 56,432 ಹುದ್ದೆಗಳ ಭರ್ತಿ

1 Min Read

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ (Job Recruitment) ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಬಿ.ಆರ್.‌ ಅಂಬೇಡ್ಕರ್‌ ರವರು ಭೇಟಿ ನೀಡಿದ ಸ್ಥಳಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿಅವರ ಹೆಸರಿನಲ್ಲಿ CBSE ಪಠ್ಯಕ್ರಮದ ನಾಲ್ಕು ಕ್ರೈಸ್‌ ವಸತಿ ಶಾಲೆ ಪ್ರಾರಂಭ publictv.in/karnataka-budg

ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.

Share This Article