ಬೆಂಗಳೂರು: ಬಿಟ್ ಕಾಯಿನ್ (Bit Coin) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 1ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ.
6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಟೆಕ್ನಿಕಲ್ ಎಕ್ಸ್ಪರ್ಟ್ ಸಂತೋಷ್ 14 ದಿನ ನ್ಯಾಯಾಂಗ ಬಂಧನಕ್ಕೆ ಹೋಗಿದ್ದಾರೆ. ಇದನ್ನೂ ಓದಿ: ಲಕ್ನೋದಿಂದ 6 ದಿನ ಕಾಲ್ನಡಿಗೆಯಲ್ಲಿ ತೆರಳಿ ರಾಮಲಲ್ಲಾಗೆ ನಮಿಸಿದ 350 ಮಂದಿ ಮುಸ್ಲಿಮರು!
ಪ್ರಕರಣದಲ್ಲಿ ಇನ್ನಷ್ಟು ವಿಚಾರಣೆ ಬಾಕಿ ಇದೆ ಹಾಗಾಗಿ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆರೋಪಿ ಸಂತೋಷ್ ಪರ ವಕೀಲ ಸುಧನ್ವ ಆಕ್ಷೇಪಣೆ ವ್ಯಕ್ತಪಡಿಸಿದರು. 6 ದಿನಗಳ ಕಸ್ಟಡಿಯಲ್ಲಿ ತನಿಖೆಗೆ ಪೂರಕ ಮಾಹಿತಿ ಕಲೆ ಹಾಕುವ ಪ್ರಯತ್ನ ಮಾಡಿಲ್ಲ ಎಂದು ವಾದ ಮಂಡಿಸಿದರು.
ವಾದ – ಪ್ರತಿವಾದ ಆಲಿಸಿದ 1ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಆದೇಶ ನೀಡಿತು.