BJP ಸರ್ಕಾರದಿಂದ ಎಲೆಕ್ಷನ್ ಗಿಫ್ಟ್ – ಹೊಸ ವರ್ಷದಿಂದ ವಿದ್ಯುತ್ ದರ ಇಳಿಕೆ?

Public TV
3 Min Read

ಬೆಂಗಳೂರು: ಹೊಸ ವರ್ಷ ಆರಂಭಕ್ಕೂ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ (Department of Electricity) ಸಿದ್ಧಪಡಿಸಿದೆ.

ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಅದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ಪ್ರತಿ ಯುನಿಟ್‌ಗೆ 70 ಪೈಸೆಯಿಂದ 2ರೂ. ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಕ್ಯಾಂಪಸ್‌ನಲ್ಲಿ ಲವ್‌ಜಿಹಾದ್‌ಗೆ ಉತ್ತೇಜನ, ಸೇನೆಗೆ ಅಪಮಾನ – 6 ಶಿಕ್ಷಕರಿಗೆ ಪಾಠ ಮಾಡದಂತೆ ಸೂಚನೆ

ಪ್ರತಿವರ್ಷ ನಡೆಸುವ ವಾರ್ಷಿಕ ದರ ಪರಿಷ್ಕರಣೆಯಲ್ಲಿ ವಿದ್ಯುತ್ ಶುಲ್ಕ (Electricity Price) ಹೆಚ್ಚಳದಿಂದ ಗ್ರಾಹಕರ ಮೇಲೆ ಹೊರೆ ಹೇರಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಲು ಇಂಧನ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸರಬರಾಜು ಕಂಪನಿಗಳಿಂದ ಕೆಇಆರ್‌ಸಿಗೆ (KERC) ಸಲ್ಲಿಸುವ ಪ್ರಸ್ತಾವನೆಯಲ್ಲಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಿ ದರಪಟ್ಟಿಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಬಿಎಸ್‌ವೈ ಭಾಗಿ

ಈ ಪ್ರಸ್ತಾಪ ಕೇವಲ ಗೃಹ ಬಳಕೆ ಗ್ರಾಹಕರಿಗೆ ಮಾತ್ರವಲ್ಲ, ಎಚ್‌ಟಿ, ಕೈಗಾರಿಕೆ, ವಾಣಿಜ್ಯ ಮತ್ತು ಎಲ್‌ಟಿ ಗ್ರಾಹಕರಿಗೂ ಅನ್ವಯವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ವಿಧಿಸಿದ್ದ ಕ್ರಾಸ್ ಸಬ್ಸಿಡಿ ಗ್ರಾಹಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರಿಂದ ಅವರು ಗ್ರಿಡ್ ತೊರೆಯುತ್ತಿದ್ದರು. ಹೀಗಾಗಿ ಎಚ್‌ಟಿ ಗ್ರಾಹಕರನ್ನು ಉಳಿಸಿಕೊಳ್ಳುವುದಕ್ಕಾಗಿ ಕ್ರಾಸ್ ಸಬ್ಸಿಡಿ ಸಡಿಲಿಸಲು ಬೆಸ್ಕಾಂ ವ್ಯಾಪ್ತಿಯಲ್ಲಿ ಹೊಸ ಪ್ರಸ್ತಾಪ ಸಲ್ಲಿಸಿ, ಪ್ರತ್ಯೇಕ ಶುಲ್ಕ ಪದ್ಧತಿಯನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮೀಣ ಗ್ರಾಹಕರಿಗೆ ರಿಯಾಯಿತಿ?
ಇಂಧನ ಇಲಾಖೆ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತುಸು ರಿಯಾಯಿತಿ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಹಕರಿಗೆ ಬಳಕೆದಾರರ ಶುಲ್ಕದಲ್ಲಿ 25 ಪೈಸೆಯಷ್ಟು ರಿಯಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 50 ಯುನಿಟ್ ವರೆಗೆ ಲೈಫ್ ಲೈನ್ ಬಳಕೆಯ ಎಲ್‌ಟಿ 2 (A1) ಹಾಗೂ ಎಲ್ಟಿ 2(A2) ಗ್ರಾಹಕರಿಗೆ ಈಗ ಪ್ರತಿ ಯುನಿಟ್‌ಗೆ ವಿಧಿಸುತ್ತಿದ್ದ 4.15 ರೂ. ಹಾಗೂ 4.05 ರೂ. ಶುಲ್ಕವನ್ನು 3.6 ರೂ.ಗೆ ಇಳಿಸಲು ಚಿಂತನೆ ನಡೆಸಲಾಗಿದೆ. ಇದನ್ನೂ ಓದಿ: ಭತ್ತಕ್ಕೆ ಉತ್ತಮ ಬೆಲೆ ಬಂದಿದ್ದರೂ ರಾಯಚೂರು ರೈತರಿಗೆ ನಿರಾಸೆ

50 ರಿಂದ 200 ಯುನಿಟ್ ವರೆಗಿನ ಬಳಕೆಗೆ ಈ ವರೆಗೆ ವಿಧಿಸುತ್ತಿದ್ದ ಎರಡು ಸ್ಲ್ಯಾಬ್‌ಗಳನ್ನು ಒಂದಕ್ಕೆ ಇಳಿಸಲು ನಿರ್ಧರಿಸಲಾಗಿದ್ದು ಸರಾಸರಿ 5.4 ರೂ. ಪ್ರತಿ ಯುನಿಟ್ ಸರಾಸರಿ ಬಳಕೆದಾರರ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರಿಂದ ಪ್ರತಿ ಯುನಿಟ್‌ಗೆ ಸರಾಸರಿ 2 ರೂ.ವರೆಗೂ ಇಳಿಕೆ ಮಾಡುವುದಕ್ಕೆ ಸಾಧ್ಯವಿದೆ ಎಂದು ಹೇಳಲಾಗುತ್ತಿದೆ. 200 ಯುನಿಟ್ ಹಾಗೂ ನಂತರದ ಬಳಕೆದಾರರಿಗೆ ಈಗಿರುವ 8.20 ಹಾಗೂ 7.70 ರೂ. ದರವನ್ನು ಏಕೀಕೃತಗೊಳಿಸಿ 7 ರೂ.ಗೆ ಇಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಸಮಯಾಧಾರಿತ ಶುಲ್ಕ:
ಇದರ ಜತೆಗೆ ಎಚ್‌ಟಿ ಗ್ರಾಹಕರಿಗೆ ಸಮಯಾಧಾರಿತ ಶುಲ್ಕ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ. ದಿನದಲ್ಲಿ 11 ಗಂಟೆ ವಿದ್ಯುತ್ ಬಳಕೆದಾರರ ಶುಲ್ಕದಲ್ಲಿ ಕಡಿತ ಮಾಡಿ ಹೆಚ್ಚಿನ ರಿಯಾಯಿತಿ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಯುನಿಟ್‌ಗೆ ಈ ಮೊದಲು ವಿಧಿಸುತ್ತಿದ್ದ 6.60 ರೂ. ಬಳಕೆದಾರರ ಶುಲ್ಕ ಹೊಸ ಪ್ರಸ್ತಾಪದಿಂದ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದ್ದು 75 ಪೈಸೆವರೆಗೆ ರಿಯಾಯಿತಿ ಸಿಗಬಹುದು ಎನ್ನಲಾಗಿದೆ.

ಈ ಬಾರಿ ವಿದ್ಯುತ್ ಶುಲ್ಕ ಪರಿಷ್ಕರಣೆ ಸಂದರ್ಭದಲ್ಲಿ ಜನಪರ ನಿಲುವು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಸಾಕಷ್ಟು ಪೂರ್ವ ತಯಾರಿ ನಡೆಸಲಾಗುತ್ತಿದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹೇರಿ ಗ್ರಾಹಕ ಸ್ನೇಹಿಯಾಗುವ ಮೂಲಕ ರಾಜ್ಯ ಸರ್ಕಾರ ಇನ್ನಷ್ಟು ಜನಪರವಾಗಲಿದೆ. ಬಳಕೆದಾರರ ಶುಲ್ಕ ಇಳಿಕೆಗೆ ಚಿಂತನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *