ಅತ್ಯಾಚಾರ ಕೇಸ್‌- ಶಾಸಕ ಮುನಿರತ್ನಗೆ ಜಾಮೀನು

Public TV
1 Min Read

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ (Rape Case) ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ (Munirathna) ಜಾಮೀನು ಸಿಕ್ಕಿದೆ.

ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿ ಬೇಲ್ ಕೊಟ್ಟಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ (BJP) ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.

Share This Article