ಪಕ್ಷ ಸಂಘಟನೆ, ಚುನಾವಣಾ ತಯಾರಿ – ಸೆ.18, 19 ರಂದು ಬಿಜೆಪಿಯಿಂದ ಚಿಂತನ, ಮಂಥನ ಸಭೆ

Public TV
1 Min Read

ಬೆಂಗಳೂರು: ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಸಂಬಂಧ ಸೆಪ್ಟೆಂಬರ್‌ ಮೂರನೇ ವಾರದಲ್ಲಿ ಕರ್ನಾಟಕ ಬಿಜೆಪಿ ಚಿಂತನ ಮಂಥನ ಸಭೆಯನ್ನು ಆಯೋಜಿಸಿದೆ.

ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ಸೆಪ್ಟೆಂಬರ್ 18, 19 ರಂದು ರಾಜ್ಯ ಬಿಜೆಪಿಯ ಚಿಂತನ ಮಂಥನ ಸಭೆ ಆಯೋಜನೆಗೊಂಡಿದೆ.  ಇದನ್ನೂ ಓದಿ: ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಎರಡು ದಿನ ನಡೆಯುವ ಸಭೆಯಲ್ಲಿ ಬಿಜೆಪಿಯ ಹಾಲಿ, ಮಾಜಿ ಜನಪ್ರತಿನಿಧಿಗಳು, ಪದಾಧಿಕಾರಿಗಳು ಸೇರಿ ಒಟ್ಟು 400 ಅಪೇಕ್ಷಿತರು ಭಾಗಿಯಾಗಲಿದ್ದಾರೆ.

ರಾಜ್ಯ ಬಿಜೆಪಿಯ ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ, ಕಾಂಗ್ರೆಸ್ ಧೋರಣೆ, ಒಗ್ಗಟ್ಟು, ಸಮನ್ವಯತೆ ಕಾಯ್ದುಕೊಳ್ಳುವುದು ಸೇರಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

Share This Article