Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ (Waqf Property) ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್‍ನಲ್ಲಿ (Karnataka Budget 2023) ಮೀಸಲಿಟ್ಟಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.

ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?

ಬೆಂಗಳೂರು ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಐಎಎಸ್ (IAS) ಹಾಗೂ ಕೆಎಎಸ್ (KAS) ಮತ್ತು ಇತರೆ ಸ್ಪರ್ದಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ ಮಾಡಲಾಗುವುದು. ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿಯಲ್ಲಿ 20 ಲಕ್ಷ ಸಾಲ ನೀಡಲಾಗುವುದಾಗಿ ಇದೇ ವೇಳೆ ತಿಳಿಸಿದರು.

126 ಶಾದಿ ಮಹಲ್ (Shaadi Mahal) ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 54 ಕೋಟಿ ಮೀಸಲಿಡಲಾಗುವುದು. ಅಲ್ಪಸಂಖ್ಯಾತ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ 20% ರಷ್ಟು ಅಥವಾ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಹೇಳಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್