Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

Public TV
3 Min Read

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಉಡುಗೊರೆ ನೀಡಿದ್ದಾರೆ. ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ (Fish Boats) ಪೆಟ್ರೋಲ್/ಡೀಸೆಲ್ (Petrol, Diesel) ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು ಎಂದು ಬೊಮ್ಮಾಯಿ (Basavaraj Bommai) ಘೋಷಿಸಿದರು.

ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟ ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ʻಮತ್ಸ್ಯ ಸಂಪದʼ ಯೋಜನೆಯೊಂದಿಗೆ ಸಂಯೋಜಿಸಿ ʻ ಮತ್ಸ ಸಿರಿʼ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದನ್ನೂ ಓದಿ: Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಯಾಂತ್ರೀಕರಣ ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ. ಮಾರುಕಟ್ಟೆ ನೆರವು ನೀಡಲಾಗಿದೆ ಹಾಗೂ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಘೋಷಿಸಿದರು.

ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ʻಭೂ ಸಿರಿ’ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಏಷ್ಯಾದಲ್ಲಿಯೇ 2ನೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಹೊಂದಿರುವ ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ 75 ಕೋಟಿ ರೂ. ಗಳ ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುವುದು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

ಆವರ್ತ ನಿಧಿಗೆ ಬಲ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಧಾನ್ಯಗಳಿಗೆ, ರೈತರಿಗೆ ತ್ವರಿತವಾಗಿ ಹಣಪಾವತಿ ಮಾಡಲು ಸ್ಥಾಪಿಸಿರುವ ಆವರ್ತ ನಿಧಿಯನ್ನು ನಮ್ಮ ಸರ್ಕಾರದ ಕಾಲಾವಧಿಯಲ್ಲಿ 2,000 ಕೋಟಿ ರೂ. ಗಳವರೆಗೆ ಹೆಚ್ಚಿಸಲಾಗುವುದೆಂದು 2020-21ನೇ ಸಾಲಿನಲ್ಲಿ ಘೋಷಿಸಲಾಗಿತ್ತು. ಪ್ರಸ್ತುತ ಆವರ್ತ ನಿಧಿ ಮತ್ತು ಕರ್ನಾಟಕ ಆಹಾರ ನಿಗಮಕ್ಕೆ ಧಾನ್ಯಗಳ ಖರೀದಿಗೆ ಬಿಡುಗಡೆ ಮಾಡಿರುವ ಅನುದಾನ ಸೇರಿ ಒಟ್ಟು 1,000 ಕೋಟಿ ರೂ. ಗಳಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1.000 ಕೋಟಿ ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 1,500 ಕೋಟಿ ರೂ. ಗಳನ್ನು ಒದಗಿಸಿ, 3,500 ಕೋಟಿ ಗಳಿಗೆ ಏರಿಸಲಾಗುವುದು. ಇದು ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಆಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *