Karnataka Budget 2023 – NEP ರದ್ದು, ಬರಲಿದೆ ರಾಜ್ಯದ್ದೇ ಹೊಸ ಶಿಕ್ಷಣ ನೀತಿ

By
1 Min Read

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್‌ ಭಾಷಣದಲ್ಲಿ (Budget Speech) ಘೋಷಿಸಿದ್ದಾರೆ.

ಬಜೆಟ್‌ ಭಾಷಣದಲ್ಲಿ ಹೇಳಿದ್ದೇನು?
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ.

ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಮತ್ತು ನಿಟ್ಟಿನಲ್ಲಿ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಹೇಳಿದರು.

 

ಚುನಾವಣಾ ಪ್ರಣಾಳಿಕೆಯಲ್ಲೇ ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಕಾಂಗ್ರೆಸ್‌ ಘೋಷಿಸಿತ್ತು. ಎನ್‌ಇಪಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಮೊದಲೇ ಘೋಷಿಸಿದ್ದರು. ಎನ್‌ಇಪಿಯನ್ನು ನಾಗ್ಪುರ ಶಿಕ್ಷಣ ನೀತಿ ಎಂದು ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಉಲ್ಲೇಖಿಸಿ ಟೀಕಿಸಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್