* ಶಾಲಾ-ಕಾಲೇಜು, ವಿವಿಗಳಲ್ಲಿ ಮಾದಕ ವಸ್ತು ಬಳಕೆ ತಡೆಯಲು ಕ್ರಮ
ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಇಂದು ರಾಜ್ಯ ಬಜೆಟ್ ಮಂಡನೆ; ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರಪ್ರಸಾರ- ವೀಕ್ಷಣೆಗೆ ಅವಕಾಶ
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.
1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ. ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಇಂದು ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ – ನಿರೀಕ್ಷೆಗೆ ತಕ್ಕಂತೆ ಗುಡ್‌ನ್ಯೂಸ್ ಕೊಡ್ತಾರಾ ಸಿಎಂ?


