ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದಾಖಲೆಯ 17ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿಯ ಬಜೆಟ್ ಇದಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಹಲವಾರು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಸದ್ಯ ನಮ್ಮ ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ ಎಂಬ ಕುರಿತು ಸಿಎಂ ತಮ್ಮ ಭಾಷಣದಲ್ಲಿ ವಿವರಿಸಿದ್ದಾರೆ.
ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ?
ಕರ್ನಾಟಕವು ತನ್ನ ಸದೃಢ ವಿತ್ತೀಯ ನಿರ್ವಹಣೆ ಮತ್ತು ಸಂಪನ್ಮೂಲ ಕ್ರೋಢೀಕರಣ ಸಾಮರ್ಥ್ಯದೊಂದಿಗೆ ಮುಂದೆ ಸಾಗುತ್ತಿದೆ. ಆದಾಗ್ಯೂ, ಕೇಂದ್ರ ಸರ್ಕಾರವು ಜಾರಿಗೆ ತಂದ ತೆರಿಗೆ ನೀತಿ ಬದಲಾವಣೆಗಳಿಂದ ರಾಜ್ಯದ ರಾಜಸ್ವ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಈ ಸವಾಲುಗಳ ನಡುವೆಯೂ, ನಮ್ಮ ಸರ್ಕಾರವು ಕೈಗೊಂಡ ಪರಿಣಾಮಕಾರಿ ಸಂಪನ್ಮೂಲ ಕ್ರೋಢೀಕರಣ ಕ್ರಮಗಳ ಫಲವಾಗಿ ರಾಜ್ಯದ ಸ್ವಂತ ರಾಜಸ್ವ ಸಂಗ್ರಹಣೆಯಲ್ಲಿ ಸ್ಥಿರತೆ ಸಾಧಿಸಲಾಗಿದೆ. 2024-25ರ ರಾಜಸ್ವ ಸಂಗ್ರಹಣೆಗೆ ಹೋಲಿಸಿದರೆ 2025-26ರ ಪರಿಷ್ಕೃತ ಅಂದಾಜುಗಳಲ್ಲಿ ರಾಜ್ಯದ ಸ್ವಂತ ರಾಜಸ್ವವು ಶೇ.8.3ರಷ್ಟು ಬೆಳವಣಿಗೆ ದಾಖಲಿಸಿದೆ. ಇದನ್ನೂ ಓದಿ: ಜಲಸಂಪನ್ಮೂಲ ಇಲಾಖೆಯಿಂದ ಈ ಬಾರಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು ಯಾವುವು? ಇಲ್ಲಿದೆ ಪಟ್ಟಿ
ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ರಾಜ್ಯದ ತೆರಿಗೆ ಆದಾಯದ ಪ್ರಮುಖ ರಾಜಸ್ವವಾಗಿದೆ. ರಾಜ್ಯದ ಸ್ವಂತ ತೆರಿಗೆ ರಾಜಸ್ವದಲ್ಲಿ ಜಿ.ಎಸ್.ಟಿ ರಾಜಸ್ವವು ಶೇ.43ರಷ್ಟು ಪಾಲು ಹೊಂದಿದೆ. ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ
ಕೇಂದ್ರ ಸರ್ಕಾರವು ಆರ್ಥಿಕ ವರ್ಷದ ಮಧ್ಯದಲ್ಲಿ ಅನಿರೀಕ್ಷಿತವಾಗಿ ಜಿ.ಎಸ್.ಟಿ ದರ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯದ ರಾಜಸ್ವ ಸಂಗ್ರಹಣೆಯು ಮತ್ತಷ್ಟು ಇಳಿಕೆಯಾಗಿದೆ. 2025-26ನೇ ಸಾಲಿನಲ್ಲಿ ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಗೂ ಮುನ್ನ, ರಾಜ್ಯದ ಸರಾಸರಿ ಮಾಸಿಕ ಜಿ.ಎಸ್.ಟಿ ರಾಜಸ್ವ (ನಿವ್ವಳ ಮರುಪಾವತಿ) ಸಂಗ್ರಹಣೆಯು ಶೇ.10ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ ದರ ತರ್ಕಬದ್ಧಗೊಳಿಸುವಿಕೆಯ ನಂತರ, ಜಿ.ಎಸ್.ಟಿ ಸಂಗ್ರಹಣೆಯ ಮಾಸಿಕ ಬೆಳವಣಿಗೆಯು ಶೇ.4 ಕ್ಕೆ ಕಡಿಮೆಯಾಗಿದೆ. ಪ್ರಸ್ತಾವಿತ ದರ ಪರಿಷ್ಕರಣೆಯಿಂದ ಪ್ರಸಕ್ತ ಸಾಲಿಗೆ ರಾಜ್ಯದ ಜಿ.ಎಸ್.ಟಿ ಸಂಗ್ರಹಣೆಯು ಅಂದಾಜು 10,000 ಕೋಟಿ ರೂ.ಗಳ ಕೊರತೆ ಉಂಟಾಗಿದೆ. ಮುಂದಿನ ವರ್ಷದಲ್ಲಿ 15,000 ಕೋಟಿ ರೂ.ಗಳ ರಾಜಸ್ವ ಕೊರತೆಯನ್ನು ಅಂದಾಜಿಸಲಾಗಿದೆ. ಇದನ್ನೂ ಓದಿ: ಇಂದು ರಾಜ್ಯ ಬಜೆಟ್ ಮಂಡನೆ; ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರಪ್ರಸಾರ- ವೀಕ್ಷಣೆಗೆ ಅವಕಾಶ
ರಾಷ್ಟ್ರೀಯ ಮಟ್ಟದಲ್ಲಿಯೂ ಸಹ, ಜಿ.ಎಸ್.ಟಿ ರಾಜಸ್ಯ ಸಂಗ್ರಹಣೆಯು ನಿರಾಶಾದಾಯಕವಾಗಿದೆ. 2025-26ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಅಂದಾಜುಗಳಿಗೆ ಹೋಲಿಸಿದರೆ, ಪರಿಷ್ಕೃತ ಅಂದಾಜುಗಳಲ್ಲಿ ಜಿ.ಎಸ್.ಟಿ ಸಂಗ್ರಹಣೆಯು ಶೇ.11 ರಷ್ಟ ಇಳಿಕೆಯಾಗಿದೆ ಹಾಗೂ 2026-270 ಆಯವ್ಯಯ ಅಂದಾಜುಗಳಲ್ಲಿ ಶೇ.13.4 ರಷ್ಟು ಇಳಿಕೆಯಾಗಿದೆ. ಇದನ್ನು 2024-25ರ ವಾಸ್ತವ ಸಂಗ್ರಹಣೆಗಿAತಲೂ ಕಡಿಮೆಯಾಗಿದೆ. ದೇಶದ ಜಿ.ಎಸ್.ಟಿ ಸಂಗ್ರಹಣೆಯು ಪ್ರಸಕ್ತ ಸಾಲಿನಲ್ಲಿ 1.3 ಲಕ್ಷ ಕೋಟಿ ರೂ.ಗಳು ಮತ್ತು ಮುಂದಿನ ವರ್ಷದಲ್ಲಿ 2 ಲಕ್ಷ ಕೋಟಿ ರೂ.ಗಳು ಕೊರತೆಯಾಗಲಿದೆ. ಇದರ ಪರಿಣಾಮವಾಗಿ ರಾಜ್ಯಗಳಿಗೆ ನೀಡುವ ತೆರಿಗೆ ಹಂಚಿಕೆಯೂ ಕಡಿಮೆಯಾಗಲಿದೆ. ಇದನ್ನೂ ಓದಿ: Karnataka Budget Live Updates
ಜಿ.ಎಸ್.ಟಿ ಸಂಗ್ರಹಣೆಯಲ್ಲಿನ ಕುಸಿತದಿಂದ ರಾಜ್ಯಗಳಲ್ಲಿ ಹೆಚ್ಚಿನ ಹಣಕಾಸು ಒತ್ತಡ ಉಂಟಾಗಿದೆ. ತೆರಿಗೆ ರಚನೆಯಲ್ಲಿನ ಬದಲಾವಣೆ ಮತ್ತು ಜಿ.ಎಸ್.ಟಿ ದರ ತರ್ಕಬದ್ದಗೊಳಿಸುವಿಕೆಯು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ

