ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ

Public TV
1 Min Read

ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ (H.K.Patil) ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.

Share This Article