ನಮ್ಮ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಲಿದೆ: ಪರಮೇಶ್ವರ್

By
1 Min Read

ಬೆಂಗಳೂರು: ನಮ್ಮ ಸರ್ಕಾರ ಜಾತಿಗಣತಿ ವರದಿಯನ್ನು (Caste Survey) ಬಿಡುಗಡೆ ಮಾಡಲಿದೆ. ಜಾತಿಗಣತಿ ಬಿಡುಗಡೆಯಿಂದ ಮೀಸಲಾತಿ ನೀಡಲು ಅನುಕೂಲ ಆಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.

ಜಾತಿಗಣತಿ ಬಿಡುಗಡೆ ವಿಚಾರ‌ವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಜಾತಿ ಗಣತಿಯನ್ನು ನಮ್ಮ ಸರ್ಕಾರ ಬಿಡುಗಡೆ ಮಾಡುತ್ತದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆದಷ್ಟು ಬೇಗ ವರದಿ ಸರ್ಕಾರಕ್ಕೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಆ ವರದಿ ಬಂದ ಮೇಲೆ ಚರ್ಚೆ ಮಾಡುತ್ತೇವೆ. ವರದಿ ಬಂದರೆ ಯಾವ ಯಾವ ಸಮುದಾಯಗಳು ಎಷ್ಟು ಇದ್ದಾರೆ ಎನ್ನುವುದು ಗೊತ್ತಾಗುತ್ತದೆ. ಪ್ರಣಾಳಿಕೆಯಲ್ಲೂ ನಾವು ವರದಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದೆವು. ಅಧ್ಯಕ್ಷರು ವರದಿ ಕೊಟ್ಟ ಬಳಿಕ ಸರ್ಕಾರ ತೀರ್ಮಾನ ಮಾಡುತ್ತದೆ ಎಂದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರೇ ವೇಷ, ಹೆಸರು ಬದಲಿಸಿಕೊಂಡು ಕಿಡಿಗೇಡಿತನ ಮಾಡ್ತಾರೆ: ರಾಮಲಿಂಗಾರೆಡ್ಡಿ

 

ವರದಿ ಬಿಡುಗಡೆಗೆ ಕೆಲವರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಗಣತಿ ಮಾಡುವ ಜವಾಬ್ದಾರಿ ಸಮಿತಿಗೆ ಕೊಟ್ಟಿತ್ತು. ಜಾತಿಗಣತಿಗೆ 100 ಕೋಟಿ ರೂ.ಗೂ ಹೆಚ್ಚು ಹಣ ಖರ್ಚಾಗಿದೆ. ಇಷ್ಟೆಲ್ಲ ಹಣ ಖರ್ಚು ಮಾಡಿ ವರದಿ ಕೊಡದೇ ಹೋದರೆ ಸರ್ಕಾರಕ್ಕೆ ಅಷ್ಟು ಹಣ ವೇಸ್ಟ್ ಆಗುತ್ತದೆ. ಒಂದು ಉದ್ದೇಶ ಇಟ್ಟುಕೊಂಡು ಜಾತಿಗಣತಿ ಮಾಡಲಾಗಿದೆ. ಸುಮ್ಮನೆ ಸರ್ಕಾರದ ಹಣ ಪೋಲಾಗಲು ಜಾತಿಗಣತಿ ಮಾಡಿಲ್ಲ. ಜಾತಿಗಣತಿಯಿಂದ ಶಾಶ್ವತ ಮಾಹಿತಿ ಇರಲಿ. ಮುಂದೆ ಮೀಸಲಾತಿ (Reservation) ಮಾಡುವ‌ ಸಮಯದಲ್ಲಿ ಇದು ಅನುಕೂಲ ಆಗುತ್ತದೆ ಎಂದರು.

ರಾಜ್ಯದಲ್ಲಿ 50% ಕ್ಕಿಂತ ಹೆಚ್ಚು ಮೀಸಲಾತಿ ಮಾಡಬೇಕು ಅಂತ ಒತ್ತಾಯ ಇದೆ. ವರದಿ ಬಂದರೆ ಇದಕ್ಕೆಲ್ಲ ಅನುಕೂಲ ಆಗಲಿದೆ ಎಂದು ತಿಳಿಸಿದರು.


Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್