– ಮಂತ್ರಾಯಲದ ಕರ್ನಾಟಕ ಛತ್ರದ ಅಭಿವೃದ್ದಿಗೆ 4 ಕೋಟಿ ರೂ. ಅನುದಾನ
– ಮಹಾರಾಷ್ಟ್ರ ರಾಜ್ಯದ ಪಂಡರಾಪುರದಲ್ಲಿರುವ ಕರ್ನಾಟಕ ಛತ್ರಕ್ಕಾಗಿ 3 ಕೋಟಿ
ಬೆಂಗಳೂರು: ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ – ಯಂಗ್ ಇಂಡಿಯಾ ಕಚೇರಿ ಸೀಲ್ ಮಾಡಿದ ED
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಬಸವರಾಜ ಬೊಮ್ಮಾಯಿ ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿ ಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ
ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂ. ಬೃಹತ್ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಕರ್ನಾಟಕ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.