ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ ಸಿಎಂ

By
3 Min Read

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರಿಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಧಾರಾವಾಹಿಯಲ್ಲೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ : ಜೇನುಗೂಡಿಗೆ ಜವಳಿ ಹಿಡಿದು ಬಂದ ಹಿರಿಯ ನಟ ಉಮೇಶ್

ಜೂನ್ 20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್‌ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

ಏನಿದೆ ಕಾರ್ಯಕ್ರಮ? 
ಪ್ರಧಾನಿ ಮೋದಿ ಅವರು ಬೆಳಗ್ಗೆ 11.55 ಕ್ಕೆ ಬೆಂಗಳೂರಿನ ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಭಾರತೀಯ ವಿಜ್ಞಾನ ಸಂಸ್ಥೆ) ನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಕ್ರಿಸ್ ಗೋಪಾಲಕೃಷ್ಣ ಅವರು 450 ಕೋಟಿ ರೂ.ಗಳ ದೇಣಿಗೆಯಲ್ಲಿ ನಿರ್ಮಿಸಿರುವ ಬ್ರೈನ್ ಸೆಲ್ ಅಭಿವೃದ್ಧಿ ಕೇಂದ್ರವನ್ನು ದೇಣಿಗೆಯಲ್ಲಿ ನಿರ್ಮಿಸಿದ್ದು ಅದರ ಉದ್ಘಾಟನೆ ನಡೆಯಲಿದೆ. ನಂತರ ಮೈಂಡ್ ಟ್ರೀ ಸಂಸ್ಥೆ 850 ಹಾಸಿಗೆಗಳ ಸಂಶೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದರು.

ಸಬ್‌ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ:
ನಂತರ 15,000 ಕೋಟಿ ರೂ.ಗಳ ವೆಚ್ಚದ ಸಬ್‌ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜೊತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ದೊರಕಲಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಚಾಲನೆ ದೊರಕಲಿದೆ. ಎಸ್‌ಟಿಆರ್‌ಆರ್ ಯೋಜನೆಗೂ ಶಂಕುಸ್ಥಾಪನೆ ನೆರವೇರಲಿದೆ. ದಾಬಸಪೇಟೆಯಿಂದ ಹೊಸಕೋಟೆ ಹಳೆ ಮದ್ರಾಸು ರಸ್ತೆಯವರೆಗೂ ಸಂಪರ್ಕಿಸುವ ರಸ್ತೆ ಇದು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೊಂದಿಗೆ 2 ಬಾರಿ ಮಾತನಾಡಿದ ಮೇಲೆ ವಿಶೇಷ ವಿನಾಯ್ತಿ ನೀಡಿ ಆದೇಶ ಮಾಡಿದ್ದಾರೆ. ವಿಶೇಷ ವಿನಾಯ್ತಿ ನೀಡಿದ ಮೇಲೆ ಈ ಯೋಜನೆಗೆ ಚಾಲನೆ ದೊರೆಯಲಿದೆ. ಇಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನೀನಾ, ನಾನಾ ಅಂತ ಕಾಳಗಕ್ಕಿಳಿದ ಹಾವು, ನಾಯಿ – ಸಾವಿನಲ್ಲಿ ಅಂತ್ಯ

ಇದಾದ ನಂತರ ಬೆಂಗಳೂರು ವಿವಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಭೇಟಿ ನೀಡಿ ಮೂರ್ತಿ ಅನಾವರಣ ಹಾಗೂ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಲಿದ್ದಾರೆ. ಅಲ್ಲಿ ಕೇಂದ್ರ ಸರ್ಕಾರಿ ಯೋಜನೆ ಫಲಾನುಭವಿಗಳ ಸಮ್ಮೇಳನವಿದೆ. ಅದನ್ನು ಮುಗಿಸಿ ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ವಿವರಿಸಿದ್ದಾರೆ.

ಕಾರ್ಯಕ್ರಮ ಯಶಸ್ವಿಗೊಳಿಸಿ:
ಈ ಎಲ್ಲ ಕಾರ್ಯಕ್ರಮಗಳ ಸಿದ್ಧತೆಗಳ ವೀಕ್ಷಣೆ ಮಾಡಿದ್ದು, ಅಚ್ಚುಕಟ್ಟಾಗಿ ಸಿದ್ಧತೆ ಆಗುತ್ತಿದೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಆಗಮಿಸುವ ಸಂದರ್ಭದಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಅಗತ್ಯ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. ಬೆಂಗಳೂರಿನ ಮಹಾಜನತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ ಎಂದು ಹೇಳಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *