ಬೆಂಗಳೂರು: ಇಂದು ರಾಜ್ಯದಲ್ಲಿ 181 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 1.65% ಮರಣ ಪ್ರಮಾಣ ಇಳಿದಿದೆ.
ರಾಜ್ಯ ರಾಜಧಾನಿಯಲ್ಲಿ ಇಂದು 122 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಕಡಿಮೆಯಾಗಿದೆ. ಇಂದು ಸೋಂಕಿನಿಂದ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಿಂದ 260 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ 2,754 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ಪ್ರಕರಣ 0.41% ಇದ್ದು, ಕೊರೊನಾ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಇಂದು 19,926 ಜನರಿಗೆ ಲಸಿಕೆಯನ್ನು ಹಾಕಿಸಲಾಗಿದೆ. ಇದನ್ನೂ ಓದಿ: ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್
ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 122, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 7, ದಕ್ಷಿಣ ಕನ್ನಡ 3, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 2, ಕೊಪ್ಪಳ 0, ಮಂಡ್ಯ 1, ಮೈಸೂರು 11, ರಾಯಚೂರು 0, ರಾಮನಗರ 3, ಶಿವಮೊಗ್ಗ 11, ತುಮಕೂರು 3, ಉಡುಪಿ 0, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿದೆ.