ಸಾವಿರಕ್ಕೂ ಕಡಿಮೆ ಸಂಖ್ಯೆಯಲ್ಲಿ ಕೊರೊನಾ ದಾಖಲು – 21 ಸಾವು

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಸಾವಿರ ಸಂಖ್ಯೆಗಿಂತ ಕಡಿಮೆ ಪ್ರಕರಣಗಳು ದಾಖಲಾಗಿದ್ದು, 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 679 ಹೊಸ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ 346 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 1.29% ಪಾಸಿಟಿವಿಟಿ ರೇಟ್ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಇಂದು ಒಟ್ಟು 1,932 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 11,360 ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 5.6 ಸಾವಿರ ಜನರು ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಟ್ರೆಕ್ಕಿಂಗ್ ಹೋಗಿ ಅಪಾಯಕ್ಕೆ ಸಿಲುಕಿದ್ದ ಯುವಕನ ವಿರುದ್ಧ ಕೇಸ್ ದಾಖಲು!

ಒಟ್ಟು ರಾಜ್ಯದಲ್ಲಿ 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ 8 ಜನರು ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 52,505 ಜನರು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಮತ್ತೆ ಹಳೆಯ ಜೀವನ ಮರಳಬಹುದೆಂಬ ಭರವಸೆ ಜನರಲ್ಲಿ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *