– ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ
ಬೆಂಗಳೂರು: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ (Water Bell) ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು ಬಾರಿ ಕೇರಳದಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದು ಈ ಕಾರ್ಯಕ್ರಮದ ಉದ್ದೇಶ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?
ಕೇರಳದಲ್ಲಿ ಶುರು ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ಇವೆ ಎನ್ನಲಾಗುತ್ತಿದೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಾಟರ್ ಬೆಲ್ ಕಾರ್ಯಕ್ರಮ ಉದ್ದೇಶವೇನು?
* ಶಾಲೆಗಳಲ್ಲಿ ಮಕ್ಕಳು ಹೆಚ್ಚು ನೀರು ಕುಡಿಯಲು ಉತ್ತೇಜಿಸುವ ಕಾರ್ಯಕ್ರಮ ಇದು.
* ಮಕ್ಕಳು ಹೆಚ್ಚು ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು.
* ಕೇರಳದಲ್ಲಿ ದಿನಕ್ಕೆ ಎರಡು ಬಾರಿ ವಾಟರ್ ಬೆಲ್ ಮಾಡೋ ಮೂಲಕ ಮಕ್ಕಳು ನೀರು ಕುಡಿಯಲು ಉತ್ತೇಜಿಸಲಾಗುತ್ತಿದೆ.
* ದಿನಕ್ಕೆ 2-3 ಬಾರಿ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ಆರೋಗ್ಯದ ಕಾಳಜಿ ಜತೆ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.