ವರುಣಾ ಕ್ಷೇತ್ರದಲ್ಲಿ 100 ಪರ್ಸೆಂಟ್ ಗೆಲ್ಲುವ ವಿಶ್ವಾಸವಿದೆ: ಸೋಮಣ್ಣ

Public TV
2 Min Read

ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ನನಗೆ 100 ಪಟ್ಟು ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ. ಜನರ ಪ್ರೀತಿ, ವಿಶ್ವಾಸ, ಮಮಕಾರ ನನ್ನ ಮೇಲಿದೆ. ಚಾಮುಂಡೇಶ್ವರಿಯ ಆಶೀರ್ವಾದ ಹಾಗೂ ಮಹದೇಶ್ವರರ ಸಂದೇಶವಿದೆ ಎಂದು ವರುಣಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ವಿ.ಸೋಮಣ್ಣ (V.Somanna) ಹೇಳಿದ್ದಾರೆ.

ಸೋಮಣ್ಣ ಹೊರಗಿನವರು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಈ ಬಾರಿ ಆಶೀರ್ವಾದ ಮಾಡುವ ನಂಬಿಕೆ ಜಾಸ್ತಿಯಿದೆ. ಯಾರು ಹೊರಗಿನವರು, ಒಳಗಿನವರು ಎನ್ನುವುದಕ್ಕಿಂತ ಹೆಚ್ಚಾಗಿ ನಮ್ಮ ಕಾಲದಲ್ಲಿ ಏನು ಮಾಡಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಸಿದ್ದರಾಮಯ್ಯ ಕೊಪ್ಪಳ (Koppal) ಹಾಗೂ ಬಾದಾಮಿಯಲ್ಲಿ (Badami) ಸ್ಪರ್ಧೆ ಮಾಡಲಿಲ್ವಾ? ಇದರ ಬಗ್ಗೆ ಅವರು ಮಾತನಾಡುವುದಿಲ್ಲ. ಸಿದ್ದರಾಮಯ್ಯ ವಾಸ್ತವಾಂಶ ಮಾತನಾಡಿದರೆ ಒಳ್ಳೆಯದು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ – ಯಾರ ಕೈ ಸೇರುತ್ತೆ ‘ಗುಬ್ಬಿ’ 

ಲಿಂಗಾಯತ ಸಿಎಂಗಳು ಭ್ರಷ್ಟ ಸಿಎಂಗಳು ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಸಿಎಂ ವಿಚಾರ ನಾನು ಚರ್ಚೆ ಮಾಡಲ್ಲ. ಅದರ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ಒಂದು ಧರ್ಮವನ್ನು ಮತ್ತೊಂದು ಧರ್ಮಕ್ಕೆ ಹೋಲಿಕೆ ಮಾಡುವುದು ನಮ್ಮ ಕರ್ತವ್ಯ ಅಲ್ಲ. ರಾಜಕಾರಣಿಗಳು ತಮ್ಮ ಇತಿಮಿತಿಯಲ್ಲಿ ಮಾತನಾಡಬೇಕು. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲ್, ಜೆ.ಎಚ್.ಪಟೇಲ್, ಎಸ್.ಆರ್ ಬೊಮ್ಮಾಯಿ, ಯಡಿಯೂರಪ್ಪನವರು ತಮ್ಮದೇ ಆದ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ದೇಶಕ್ಕೆ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನಾಗಪುರದಿಂದ ಯಾರೇ ಬಂದರೂ ಚುನಾವಣೆ ಮಾಡಲು ಆಗಲ್ಲ: ಬಿಜೆಪಿ ನಾಯಕರಿಗೆ ಶೆಟ್ಟರ್ ತಿರುಗೇಟು 

ಒಂದು ಬಾರಿ ಭಾವುಕರಾಗಿ ಮಾತನಾಡಿ ಎರಡೇ ನಿಮಿಷಕ್ಕೆ ಉಲ್ಟಾ ಹೊಡೆಯುವ ವ್ಯವಸ್ಥೆಯನ್ನು ನಾನು ನೋಡಿದ್ದೇನೆ. ಅದರ ಬಗ್ಗೆ ಹೆಚ್ಚು ಚರ್ಚೆ ಮಾಡಲ್ಲ. ಇದನ್ನು ಸಿದ್ದರಾಮಯ್ಯ ಮನವರಿಕೆ ಮಾಡಿಕೊಂಡು ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಒಡನಾಟ ಇಟ್ಟುಕೊಂಡು ಕೆಲಸ ಮಾಡಬೇಕಿದೆ. ಜಾತಿ ನಿಮಿತ್ತ ಮಾತ್ರ ಇದನ್ನು ವೈಭವೀಕರಿಸಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಎಂ.ಬಿ.ಪಾಟೀಲ್‌ 

ಎಲ್ಲಾ ವರ್ಗದ ಜನರು ಸೋಮಣ್ಣನಂತಹ ಕೆಲಸಗಾರರು ಬೇಕು ಎಂದು ಕೇಳುತ್ತಿದ್ದಾರೆ. ಮತದಾರರು ಹತ್ತಾರು ಭಾರಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ. ವಸತಿ ಸಚಿವರಾಗಿ ಸೋಮಣ್ಣ ಏನು ಕೆಲಸ ಮಾಡಿದ್ದಾರೆ ಎಂಬುದು ಸಿದ್ದರಾಮಯ್ಯಗೆ ಗೊತ್ತಿದೆ. ನನ್ನ ಬಗ್ಗೆ ಸಿದ್ದರಾಮಯ್ಯನವರೇ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬೊಮ್ಮಾಯಿ ಆರೋಪ

Share This Article