ಕೈ ಅಭ್ಯರ್ಥಿಗೆ ಚುನಾವಣಾ ಅಧಿಕಾರಿಗಳಿಂದ ಶಾಕ್ – ಕೆಎಂ ಉದಯ್ ಬೆಂಬಲಿಗರ ಮನೆಯಲ್ಲಿ 2 ಕೋಟಿ ಹಣ ಪತ್ತೆ

Public TV
1 Min Read

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. ಮಂಡ್ಯದ (Mandya) ಮದ್ದೂರು (Maddur) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಕೆಎಂ ಉದಯ್ (KM Uday) ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.

ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ. ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿದ್ದು, 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: 2 ದಿನವೂ ಬೆಂಗಳೂರಿನಲ್ಲಿ ಮೋದಿ ಹವಾ

ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದ್ದು, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದಾರೆ. ಮಾತ್ರವಲ್ಲದೇ ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಸಂಸ್ಕೃತ ಪರೀಕ್ಷೆಯಲ್ಲಿ ಇರ್ಫಾನ್‌ಗೆ ಮೊದಲ ಸ್ಥಾನ – 13,000 ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಸಾಧನೆ

Share This Article