ತಂದೆಗೆ ಟಿಕೆಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಅಭ್ಯರ್ಥಿಯ ಪುತ್ರ – ಕಾಂಗ್ರೆಸ್‍ನಿಂದ ವೀಡಿಯೋ ರಿಲೀಸ್

Public TV
1 Min Read

ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ತಂದೆಗೆ ಟಿಕೆಟ್ ಸಿಕ್ಕಿದ್ದಕ್ಕೆ ಬಿಜೆಪಿ (BJP) ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡುತ್ತಿರುವ ವೀಡೀಯೋವೊಂದನ್ನು ಕಾಂಗ್ರೆಸ್ (Congress) ಮುಖಂಡರು ಬಿಡುಗಡೆ ಗೊಳಿಸಿದ್ದಾರೆ.

ವಿಜಯಪುರ (Vijayapura) ಕೆಪಿಸಿಸಿ ಪ್ರಚಾರ ಸಮೀತಿ ವಕ್ತಾರ ಸಂಗಮೇಶ ಬಬಲೇಶ್ವರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ವೀಡಿಯೋವನ್ನು ಬಿಡುಗಡೆಗೊಳಿಸಿದ್ದಾರೆ. ವೀಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಪುತ್ರ ಸಮರ್ಥ ವಿಜುಗೌಡ ಪಾಟೀಲ್ ಗಾಳಿಯಲ್ಲಿ 2 ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಗುಂಡಾಗಿರಿ ಮಾಡುತ್ತಿದ್ದಾರೆ. ಜನರಿಗೆ ಕರೆ ಮಾಡಿ ಬೆದರಿಸಿ ಮತ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಸಮರ್ಥ ವಿಜುಗೌಡ ಪಾಟೀಲ್ ಗಾಳಿಯಲ್ಲಿ ಎರಡು ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಿದರು. ಇದನ್ನೂ ಓದಿ: ಇದು ಮುಸ್ಲಿಂ ಲೀಗ್ ಪ್ರಣಾಳಿಕೆ – ವೇದಿಕೆಯಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟ ಈಶ್ವರಪ್ಪ

ಬಿಜೆಪಿಯ ನೈತಿಕತೆ ಇದೇನಾ, ಇಂತಹ ಗುಂಡಾ ಅಭ್ಯರ್ಥಿ ಟಿಕೆಟ್ ನೀಡಿದೆ. ಇದಕ್ಕೆ ಅಮಿತ್ ಶಾ ಉತ್ತರ ನೀಡಬೇಕು. ನಮ್ಮ ಮತಕ್ಷೇತ್ರ ಬಿಹಾರ ಆಗಬಾರದು. ಇಂತಹ ಗುಂಡಾ ಅಭ್ಯರ್ಥಿ ಮತ ನೀಡಬಾರದು ಎಂದು ಮನವಿ ಮಾಡಿದ ಕಾಂಗ್ರೆಸ್ ಮುಖಂಡರು ಗುಂಡು ಹಾರಿಸಿದ ವೀಡಿಯೋವನ್ನು ಬಿಡುಗಡೆ ಮಾಡಿದರು. ಇದನ್ನೂ ಓದಿ: ಚಾಮರಾಜನಗರದಲ್ಲಿ ಹೈವೋಲ್ಟೇಜ್‌ ಫೈಟ್‌ – ಅಖಾಡದಲ್ಲಿ ಸಚಿವ ಸೋಮಣ್ಣ vs ಸಿದ್ದು ಶಿಷ್ಯ; ಯಾರಾಗ್ತಾರೆ ಪೈಲ್ವಾನ್?

Share This Article