ಎಂ.ಬಿ ಪಾಟೀಲ್‌ಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಸುರೇಶ್

Public TV
1 Min Read

ಬೆಂಗಳೂರು: 5 ವರ್ಷ ಸಿದ್ದರಾಮಯ್ಯ(Siddaramaiah) ಸಿಎಂ ಎಂಬ ಎಂ.ಬಿ ಪಾಟೀಲ್ (M.B.Patil) ಅವರ ಹೇಳಿಕೆಗೆ ಸಂಸದ ಡಿಕೆ ಸುರೇಶ್ (D.K.Suresh) ಆಕ್ರೋಶ ವ್ಯಕ್ತಪಡಿಸಿದ್ದು, ನೇರ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಪೂರ್ಣಾವಧಿಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆಯೊಂದನ್ನು ನೀಡಿದ್ದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು, ನಾನು ಎಂ.ಬಿ.ಪಾಟೀಲ್ ಹೇಳಿಕೆಗೆ ಉತ್ತರ ಕೊಡಬಲ್ಲೆ. ಆದರೆ ಅದು ಈಗ ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧವಾದ ಸುಮಲತಾ ಅಂಬರೀಶ್

ಎಂ.ಬಿ.ಪಾಟೀಲ್ ಹೇಳಿಕೆಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೆಂದರೆ ಸುರ್ಜೇವಾಲಾ ಅವರ ಹತ್ತಿರ ಮಾತನಾಡಿ. ನಾನು ಅವರ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ. ಆದರೆ ಈಗ ಅದು ಬೇಡ. ನನಗೂ ಎಂ.ಬಿ.ಪಾಟೀಲ್ ಹೇಳಿಕೆಗೆ ಉತ್ತರ ನೀಡಲು ಬರುತ್ತದೆ ಎಂದು ಖಡಕ್ ಆಗಿ ಹೇಳಿದ್ದಾರೆ. ಇದನ್ನೂ ಓದಿ: ಹೇಳಿಕೆಗಳಿಗೆ ಬ್ರೇಕ್‌ ಬೀಳದಿದ್ರೆ ಸರ್ಕಾರದಿಂದ ಹೊರಗಿರುತ್ತೇನೆ: ಎಂಬಿಪಿ ವಿರುದ್ಧ ಡಿಕೆಶಿ ಕೆಂಡಾಮಂಡಲ

Share This Article