ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

Public TV
2 Min Read

ಹಾಸನ: ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂದು ಅಪ್ರಚಾರ ಮಾಡುತ್ತಿರುವುದಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿಯವರು (A.T.Ramaswamy) ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಬುಧವಾರ ಹಾಸನದಲ್ಲಿ (Hassan) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಸೇರಿದ್ದು ಯಾವುದೇ ಅಧಿಕಾರದ ಆಸೆಗಾಗಿ ಅಲ್ಲ ಎಂದು ಎಲ್ಲೆಡೆ ಹೇಳಿದ್ದೇನೆ. ನಾನು ಟಿಕೆಟ್ ಅಪೇಕ್ಷಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ವರಿಷ್ಠರೂ ಕೂಡ ಬಹಳ ಒತ್ತಡ ಹಾಕಿ ಅಭ್ಯರ್ಥಿ ಆಗಲು ಹೇಳಿದ್ದರು. ನಾನು ಯಾವುದೇ ಕಾರಣದಿಂದ ಸ್ಪರ್ಧೆ ಮಾಡಲ್ಲ ಎಂದು ಅವರಿಗೆ ಹೇಳಿದ್ದೆ. ನಾನು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ರಾಮಸ್ವಾಮಿ ಅವರು ಬಿಜೆಪಿಗೆ ಹೋದರೂ ಟಿಕೆಟ್ ಸಿಗಲಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು ಎಂದರು. ಇದನ್ನೂ ಓದಿ: ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಎಡವಟ್ಟು 

ನಾನು ಆಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ನನ್ನ ನಡೆಯಿಂದ ಯಾರಿಗಾದರೂ ಬೇಜಾರಾಗಿದ್ದರೆ ಕ್ಷಮಿಸಿ. ಈಗ ರಾಜಕಾರಣದಲ್ಲಿ ಮೌಲ್ಯ ಇಲ್ಲದಾಗಿದೆ. ರಾಜಕೀಯ (Politics) ಈಗ ವ್ಯಾಪಾರವಾಗಿದೆ. ಕೆಲವರು 50 ಕೋಟಿಯವರೆಗೂ ಬಂಡವಾಳ ಹೂಡಲು ಹೊರಟಿದ್ದಾರೆ. ರಾಜಕಾರಣದಲ್ಲಿ ಮೌಲ್ಯ ಉಳಿಸಬೇಕಾಗಿದೆ. ಒಳ್ಳೆಯವರು, ಪ್ರಾಮಾಣಿಕರು, ಯೋಗ್ಯರು ರಾಜಕಾರಣಕ್ಕೆ ಬರಲು ಕಷ್ಟವಾಗುತ್ತಿವೆ. ಏಕೆಂದರೆ ಬಂಡವಾಳ ಹೂಡಿದ ಮೇಲೆ ಅದನ್ನು ವಾಪಸ್ ಪಡೆಯಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಜೆಡಿಎಸ್‌ ಬಾಗಿಲು ತಟ್ಟಿದ ದತ್ತಾ

ಈ ರಾಜಕೀಯ ವ್ಯವಸ್ಥೆ ಬದಲಾಗಬೇಕಿದೆ. ಚುನಾವಣಾ ಆಯೋಗ ಸಹ ಕಟ್ಟುನಿಟ್ಟಿನ ಕ್ರಮ ವಹಿಸಬೇಕಿದೆ. ಇಲ್ಲವಾದರೆ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತದೆ. ಸತ್ಯ, ಧರ್ಮ, ನ್ಯಾಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಅದರ ಆಚರಣೆ ಮಾಡಲು ಹಿಂದೆ ಸರಿಯುತ್ತಾರೆ. ಹಿತೈಷಿಗಳಿಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್ 

ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ನನಗೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದ್ದರು. ಕೆಲವರು ನನಗೆ ಕೊಡಿ, ಮಕ್ಕಳಿಗೂ ಕೊಡಿ ಎಂದು ಕೇಳುತ್ತಾರೆ. ಆದರೆ ನಿಮ್ಮದು ವಿಶೇಷ ಎಂದು ಅವರು ಹೇಳಿದ್ದರು. ನಾನು ರಾಜಕೀಯದಿಂದ ತಟಸ್ಥನಾಗಿರಬೇಕು ಎನ್ನುವ ಭಾವನೆ ಇತ್ತು. ಆದರೆ ನನ್ನ ಹಿತೈಷಿಗಳು, ಬೆಂಬಲಿಗರ ರಕ್ಷಣೆಗಾಗಿ ಕೆಲಸ ಮಾಡಲು ಒಂದು ಪಕ್ಷ ಬೇಕು ಎಂದು ಈ ನಿರ್ಧಾರ ಕೈಗೊಂಡಿದ್ದೇನೆ. ನಾನು ಭ್ರಷ್ಟಾಚಾರದ (Corruption) ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ 

ಚುನಾವಣೆಯಲ್ಲಿ (Election) ಕ್ಯಾಸ್ಟ್ (Caste) ಮತ್ತು ಕ್ಯಾಶ್ (Cash) ಎಂಬ ಎರಡು ಸಿಸಿಗಳು ಕೆಲಸ ಮಾಡಲಿವೆ. ಈ ಎರಡೂ ಪ್ರಭಾವ ಬೀರದಂತೆ ಕೆಲಸ ಮಾಡಿದರೆ ಪ್ರಜಾಪ್ರಭುತ್ವ ಮತ್ತಷ್ಟು ಎತ್ತರಕ್ಕೆ ಹೋಗಲಿದೆ ಎಂದರು. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

Share This Article