ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ: ಜಿರಲಿ

Public TV
1 Min Read

ಬೆಳಗಾವಿ: ಬಿಜೆಪಿ (BJP) ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ ಜಿರಲಿ (M.B.Jirali) ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿಗೆ ಚಿಂತನೆ ನಡೆಸುತ್ತೇವೆ. ಸಂಪೂರ್ಣ ಬಹುಮತ ಪಡೆದು ಕಾಂಗ್ರೆಸ್ (Congress) ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಎಲ್ಲಾ ನಾಯಕರಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ. ಜನರ ಆದೇಶವನ್ನು ನಾವು ಸ್ವೀಕಾರ ಮಾಡಿದ್ದೇವೆ. ರಾಜ್ಯದಲ್ಲಿ ರಚನೆಯಾಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಮೋದಿ ಸರ್ಕಾರ ಸಹಕಾರ ನೀಡುತ್ತದೆ ಎಂದರು. ಇದನ್ನೂ ಓದಿ: 42 ಕಡೆ 5 ಸಾವಿರಕ್ಕೂ ಕಡಿಮೆ ಅಂತರದ ಗೆಲುವು – 2023, 2018ರಲ್ಲಿ ಯಾರಿಗೆ ಎಷ್ಟು ಮತ?

ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಗೆಲುವಿನ ನಂತರ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಸೋಶಿಯಲ್ ಮೀಡಿಯಾದಲ್ಲಿ ನೋಡಿದ್ದೇವೆ. ಇದು ಖಂಡನೀಯ ಎಂದ ಅವರು ಅದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ

ಬೆಳಗಾವಿ ಜಿಲ್ಲೆಯಲ್ಲಿ 7 ಸ್ಥಾನ ಗಳಿಸಿದ್ದೇವೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿ ಸೋಲಿಗೆ ಕಾರಣವಾದ ಕೊರತೆಗಳನ್ನು ತುಂಬಿ ಜನರ ವಿಶ್ವಾಸ ಗಳಿಸಲು ಪ್ರಯತ್ನ ಮಾಡುತ್ತೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ಯವಹಿಸುತ್ತೇವೆ. ಜಿಲ್ಲೆಯಲ್ಲಿ ಸೋಲಿನ ಹೊಣೆಯನ್ನು ಬಿಜೆಪಿ ಪಕ್ಷ ಹೊತ್ತುಕೊಂಡಿದೆ ಎಂದು ಹೇಳಿದರು.‌ ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ವಿಜಯೇಂದ್ರ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ
Share This Article