ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ: ಸುಧಾಕರ್

Public TV
1 Min Read

ಚಿಕ್ಕಬಳ್ಳಾಪುರ: ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್‌ (Congress) ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ (Sudhakar) ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಟ್ರೆ ನಾನು ಸಹ ಅದೇ ರಕ್ತದಲ್ಲಿ ಬರೆದು ಕೊಡುತ್ತೇನೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲ್ಲ. ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿ ಆಡಳಿತ ಮಾಡುತ್ತೇವೆ. ಕಾಂಗ್ರೆಸ್ ಮುಳುಗುವ ಹಡುಗು. ಹೀಗಾಗಿ ಡಿ.ಕೆ ಶಿವಕುಮಾರ್ ಸಹ ಬಿಜೆಪಿಗೆ ಬರುವ ದಿನಗಳು ದೂರ ಇಲ್ಲ ಎಂದು ಡಿ.ಕೆ. ಶಿವಕುಮಾರ್ (DK Shivakumar) ಹೇಳಿಕೆಗೆ ತಿರುಗೇಟು ನೀಡಿದರು.

ಮೇ 13 ಬಿಜೆಪಿಯ (BJP) ಶವಾಚರಣೆ ಮಾಡುತ್ತೇವೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಟಾಂಗ್ ನೀಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಅವನತಿಯಾದ ರೀತಿಯಲ್ಲೇ ಕರ್ನಾಟಕದಲ್ಲೂ ಅವನತಿಯಾಗಲಿದೆ. ಲೋಕಸಭಾ ಚುನಾವಣಾ ವೇಳೆಗೆ ಕಾಂಗ್ರೆಸ್‍ಗೆ ಅಭ್ಯರ್ಥಿಗಳೇ ಸಿಗಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ? – ಸೋಮಣ್ಣರದ್ದು ಎನ್ನಲಾದ ಆಡಿಯೋ ವೈರಲ್

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಲಿಂಗಾಯತ-ಒಕ್ಕಲಿಗರ ಭಿಕ್ಷುಕರಾ? ಎಂದು ಕೇಳಿದ ಡಿಕೆಶಿಗೆ ತಿರುಗೇಟು ನೀಡಿದ ಅವರು, ನೀವೇ ಪವರ್ ಮಿನಿಸ್ಟರ್ ಆಗಿದ್ರಲ್ಲಾ? ಒಕ್ಕಲಿಗ ಸಮುದಾಯದ ಮಗ ಅಂತೀರಲ್ಲ? ಯಾಕೆ 1% ಮೀಸಲಾತಿ ಹೆಚ್ಚಳ ಮಾಡಿಸಲಿಲ್ಲ? ಮೀಸಲಾತಿ ಹೆಚ್ಚಳ ಮಾಡಿರುವ ಹೆಮ್ಮೆ ಬಿಜೆಪಿಗಿದೆ ಎಂದರು. ಇದನ್ನೂ ಓದಿ: ರಕ್ತದಲ್ಲಿ ಬರೆದು ಕೊಡ್ತೀನಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ – ಡಿಕೆಶಿ

Share This Article