ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

Public TV
3 Min Read

ಮಂಗಳೂರು: ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ಪರಿಹಾರ ಘೋಷಿಸಿದಂತೆ, ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ.

ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ 25 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

ಬೆಳ್ಳಾರೆಯ ಮೃತ ಪ್ರವೀಣ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳನ್ನ ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಕೊಲೆಪ್ರಕರಣ ಬೇಧಿಸುವವರೆಗೆ ಅಕ್ಷರಶಃ ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರವೀಣ್ ಕೊಲೆಗೈದವರಿಗೆ ಶಿಕ್ಷೆಯಾದಾಗ ಮಾತ್ರ ಆತ್ಮಕ್ಕೆ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರೂ ಇದೇ ಮಾತು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು. ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

ಇದು ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ 10 ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದರಿಂದ ನಿರ್ಭೀತಿಯಿಂದ ಈ ಘಟನೆ ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರಿಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

ಕರ್ನಾಟಕಕ್ಕೆ ಎನ್‌ಐಎ ಅಗತ್ಯವಿದೆ: ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಕಳುಹಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್‌ಐಎ ಅವಶ್ಯಕತೆಯಿದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ, ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇದಿಸಲಾಗುವುದು. ಪಿಎಫ್‌ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಮಸೂದ್ ಹತ್ಯೆ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಅನ್ನೋ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *