ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಲು ಕರ್ನಾಟಕ ಸರ್ಕಾರ ನಿರ್ಧಾರ

Public TV
2 Min Read

ಬೆಂಗಳೂರು: ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಮೇಲೆ ಮಹಾರಾಷ್ಟ್ರ ಬಿಜೆಪಿ (Maharashtra BJP) ಘಟಕದ ವಿರುದ್ಧ ಕರ್ನಾಟಕ ಸರ್ಕಾರ (Karnataka Govt) ಪ್ರಕರಣ ದಾಖಲಿಸಲು ನಿರ್ಧರಿಸಿದೆ. ಈ ಕುರಿತು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು (Advertisement) ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ, ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಳ್ಳಾರಿ| ಒಂದೇ ದಿನ ಸಿಸೇರಿಯನ್‌ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ

ಮುಂದುವರಿದು ಅಲ್ಲದೇ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು (Guarantee Scheme) ಜಾರಿ ಆಗದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನಮ್ಮ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಿಕ್ಷೆ ಬೇಡುವವಳಿಗೆ ಮಗು ಕೊಟ್ಟು ತಾಯಿ ಕಣ್ಣೀರು – ಮಗುವಿನೊಂದಿಗೆ ಮಹಿಳೆ ಪರಾರಿ

Share This Article