ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ: SIT ತನಿಖೆಗೆ ರಾಜ್ಯ ಸರ್ಕಾರ ತೀರ್ಮಾನ

Public TV
1 Min Read

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ದರಾಮಯ್ಯ, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ

ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Share This Article