ಬೆಂಗಳೂರು: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ ಎದುರಾಗಿದೆ. ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ (ESMA) ಜಾರಿ ಮಾಡಿದೆ.
ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆ.5 ರಂದು ಬಸ್ ನಿಲ್ಲಿಸಿ ಪ್ರತಿಭಟಿಸಲು ಸಾರಿಗೆ ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಓದಗಿಸೋದು ಅಗತ್ಯ ಸೇವೆ. ಈ ಹಿನ್ನೆಲೆ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಎಸ್ಮಾ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ
ಇಂದಿನಿಂದ 6 ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಜು.1 ರಿಂದ ಡಿ.31 ರ ವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್‌ಆರ್‌ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್